ಸಾಗರ ತಾಲೂಕಿನ ಆಲಳ್ಳಿ ಹೊಸಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು!

ಹಂಚಿಕೊಳ್ಳಿ
WhatsApp Facebook X Telegram
Sagar Alalli Hosakere Two Boys Drown While Swimming
Sagar Alalli Hosakere Two Boys Drown While Swimming
dasara add shivamogga palike

ಮಲೆನಾಡು ಟುಡೆ ಸುದ್ದಿ / ತಾಳಗುಪ್ಪ / ಸಾಗರ ತಾಲೂಕಿನ ಶಿರೂರು ಆಲಳ್ಳಿ ಗ್ರಾಮದ ಹೊಸಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತಪಟ್ಟ ಬಾಲಕರನ್ನು ಆಲಳ್ಳಿ ಮುಳುಕೇರಿಯ ಷಣ್ಮುಖ ಅವರ ಪುತ್ರ ಲೇಖನ್ (13) ಹಾಗೂ ಆಲಳ್ಳಿ ಗ್ರಾಮದ ಗಣೇಶ್ ಅವರ ಪುತ್ರ ಪುನೀತ್ (11) ಎಂದು ಗುರುತಿಸಲಾಗಿದೆ.

ಇಬ್ಬರೂ ಬಾಲಕರು ಹೊಸಕೆರೆಯಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತಪಟ್ಟ ಲೇಖನ್ ಹಾಗೂ ಪುನೀತ್ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ.

ಸಾಗರ ಉಪವಿಭಾಗೀಯ ಆಸ್ಪತ್ರೆಯ ಬಳಿ ನೆರೆದಿದ್ದ ಕುಟುಂಬದವರ ದುಃಖದ ದೃಶ್ಯ ಮನಕಲಕುವಂತಿತ್ತು. ಎಳೆಯ ವಯಸ್ಸಿನ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಆಲಳ್ಳಿ ಗ್ರಾಮಸ್ಥರು ಹಾಗೂ ಸ್ಥಳೀಯರಿಗೆ ಆಘಾತ ಉಂಟುಮಾಡಿದೆ.ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

dasara add shivamogga palike
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor