KARNATAKA NEWS/ ONLINE / Malenadu today/ Oct 15, 2023 SHIVAMOGGA NEWS
ಸಾಗರ ತಾಲೂಕಿನ ಶ್ರೀ ಕ್ಷೇತ್ರ ಸಿಗಂದೂರಿನ ಚೌಡೇಶ್ವರಿ ದೇವಿ ಪೂಜೆಗೆ ಸಂಬಂಧಪಟ್ಟಂತೆ ಸಾಗರ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದೇವಸ್ಥಾನದ ಪ್ರಧಾನ ಅರ್ಚಕ ಎಸ್.ಪಿ. ಶೇಷಗಿರಿ ಭಟ್ ಅವರಿಗೆ ಪೂಜೆ ಮಾಡಲು ಅಡ್ಡಿಪಡಿಸಬಾರದು ಎಂದು ತಿಳಿಸಿದೆ.
ಈ ಹಿಂದೆ ಸಿಗಂದೂರು ಚೌಡೇಶ್ವರಿದೇವಿ ಪೂಜೆಗೆ ಸಂಬಂಧಪಟ್ಟಂತೆ ಧರ್ಮದರ್ಶಿ ಡಾ. ರಾಮಪ್ಪಮತ್ತು ಪ್ರಧಾನ ಅರ್ಚಕ ಎಸ್.ಪಿ. ಶೇಷಗಿರಿ ಭಟ್ ನಡುವೆ ವಿವಾದ ಉಂಟಾಗಿತ್ತು, ಪೂಜೆ ಯಾರು ಮಾಡಬೇಕು ಎನ್ನುವುದಕ್ಕೆ ದೇವಸ್ಥಾನದ ಆವರಣದಲ್ಲಿ ಪರಸ್ಪರ ಜಗಳ ನಡೆದು ಪೊಲೀಸರು ಮಧ್ಯಪ್ರವೇಶ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು,
ಈ ಹಿನ್ನೆಲೆ ದೇವಿಪೂಜೆ ಮಾಡಲು ತಮಗೆ ಅವಕಾಶ ಕಲ್ಪಿಸುವಂತೆ ಪ್ರಧಾನ ಅರ್ಚಕ ಶೇಷಗಿರಿ ಭಟ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಕೋರ್ಟ್ ಪ್ರಧಾನ ಆರ್ಚಕರಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿತ್ತು.
ಈ ಆದೇಶ ಪ್ರಶ್ನಿಸಿ ಧರ್ಮದರ್ಶಿ ಡಾ.ರಾಮಪ್ಪ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವಾದ- ಪ್ರತಿವಾದ ಆಲಿಸಿ ಹಿಂದಿನ ಆದೇಶದಂತೆ ಪ್ರಧಾನ ಅರ್ಚಕ ಎಸ್. ಪಿ.ಶೇಷಗಿರಿ ಭಟ್ ಅವರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಆದೇಶ ಮಾಡಿದೆ.
ಇನ್ನಷ್ಟು ಸುದ್ದಿಗಳು