ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಸಾಗರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದ (Sagar Government PU College) ಅಂಗವಾಗಿ ಡಿ. 23 ಮತ್ತು 24ರಂದು ಇಲ್ಲಿ ಶಿಕ್ಷಣ ಪಡೆದ ಸಾಧಕರು, ಹಿಂದಿನ ಉಪನ್ಯಾಸಕರು ಸೇರಿ ಹಲವರಿಗೆ ಸನ್ಮಾನ ಮಾಡಲಾಗುತ್ತಿದೆ. ಜೊತೆಯಲ್ಲಿ ವಿವಿಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲಾಗುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಭತ್ತ ಖರೀದಿಗೆ MSP ನಿಗದಿ, ನಿಗದಿಪಡಿಸಿದ ಕನಿಷ್ಟ ದರವೆಷ್ಟು..?
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ ಶಾಸಕ ಬೇಳೂರು, ಇಲ್ಲಿ ಕಲಿತ ಲಕ್ಷಾಂತರ ವಿದ್ಯಾರ್ಥಿಗಳು ದೊಡ್ಡದೊಡ್ಡ ಹುದ್ದೆಯಲ್ಲಿದ್ದಾರೆ. ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಎಲ್ಲರನ್ನೂ ಆಹ್ವಾನಿಸುತ್ತಿದ್ದೇವೆ. ನಾನೂ ಸಹ ಇದೇ ಕಾಲೇಜಿನ ಹಳೆಯ ವಿದ್ಯಾರ್ಥಿ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಇಲ್ಲಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಈಗಾಗಲೇ 50 ಲಕ್ಷ ರೂಪಾಯಿ ನೀಡಲಾಗಿದೆ. ಇದೇ ತಿಂಗಳ 23ರಂದು ಉದ್ಘಾಟನಾ ಸಮಾರಂಭ, ಹಳೆ ವಿದ್ಯಾರ್ಥಿಗಳ ಸಮಾಗಮ, 24ರಂದು ಸ್ಮರಣ ಸಂಚಿಕೆ ಬಿಡುಗಡೆ, ಝೀಕನ್ನಡ ಖ್ಯಾತಿಯ ಕಲಾವಿದರಿಂದ ರಸಮಂಜರಿ ಏರ್ಪಡಿಸಲಾಗಿದೆ ಎಂದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎ.ಇಂದುಧರ ಗೌಡ, ಸದಸ್ಯರಾದ ಸಲೀಂ, ಉಮೇಶ್ ಸೂರನಗದ್ದೆ, ಭವ್ಯ, ಬಸವರಾಜ್, ಲೋಕೇಶ್, ಪ್ರಾಚಾರ್ಯ ಕೆ.ಸಿ. ಸತ್ಯನಾರಾಯಣ ಮೊದಲಾದವರಿದ್ದರು.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
