ಮಳೆ..ಮಳೆ..ಮಳೆ..ನಾಳೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಶಾಲೆ ಕಾಲೇಜು ರಜೆ

ಹಂಚಿಕೊಳ್ಳಿ
WhatsApp Facebook X Telegram
Sagara Helpline Trust sagara news malenadutoday image
Sagara Helpline Trust sagara news malenadutoday image

Sagar Holiday / ಮಲೆನಾಡು ಟುಡೆ / ಸಾಗರ / ಶಿವಮೊಗ್ಗದಲ್ಲಿ ಬೆಳಗ್ಗೆಯಿಂದಲೂ ಮಳೆಯಾಗುತ್ತಲೇ ಇದೆ. ಪರಿಣಾಮ ಇವತ್ತು ನೀಡಿದಂತೆ ಸಾಗರ ತಾಲ್ಲೂಕಿನಲ್ಲಿ ನಾಳೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಾಳೆಯು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾಗರ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಜುಲೈ 8, 2026 ರ ಬುಧವಾರದಂದು ಒಂದು ದಿನದ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಮಳೆಯ ತೀವ್ರತೆ ಹೆಚ್ಚಾಗುವ ಮುನ್ಸೂಚನೆ ಇರುವ ಕಾರಣ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ರಜೆಯ ದಿನದಂದು ಶಿಕ್ಷಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಿದ್ದು, ಶಾಲೆ-ಕಾಲೇಜು ಕಟ್ಟಡಗಳ ಸ್ಥಿತಿಗತಿ ಹಾಗೂ ತುರ್ತು ಪರಿಸ್ಥಿತಿಯನ್ನು ಗಮನಿಸಬೇಕೆಂದು ಆದೇಶದಲ್ಲಿ ಸೂಚಿಸಲಾಗಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor