SHIVAMOGGA NEWS TODAY

ಸಾಗರ: ಸಾಲಬಾಧೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಗ್ರಾಮದಲ್ಲಿ ಸಾಲಬಾಧೆಯಿಂದ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಬಳ್ಳಿಬೈಲು ಗ್ರಾಮದ ನಿವಾಸಿ ಗೋಪಾಲ್.ಎಂ (56) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತ. ಮನೆಯ ಹಿಂಬದಿಯಲ್ಲಿದ್ದ ಮಾವಿನ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಗೋಪಾಲ್​ ಮೃತದೇಹ ಪತ್ತೆಯಾಗಿದೆ.

ಡಾ.ಬಿ.ಡಿ ಬೂಕಾಂತ್​ಗೆ ರಾಜ್ಯ ಸಚಿವ ದರ್ಜೆ ಸ್ಥಾನ! ಶಿವಮೊಗ್ಗ, ಶಿಕಾರಿಪುರ ಕಾಂಗ್ರೆಸ್​ ವಲಯದಲ್ಲಿ ಸಂಚಲನ! ಅಚ್ಚರಿ! ಅಸಮಾಧಾನ?

ಮೃತ ರೈತ ಗೋಪಾಲ್ ಅವರು ಬ್ಯಾಂಕ್‌ಗಳು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸೇರಿದಂತೆ ಹಲವೆಡೆ ಸುಮಾರು 5 ಲಕ್ಷ ರೂಪಾಯಿಗೂ ಅಧಿಕ ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ತೀರಿಸಲಾಗದ ಚಿಂತೆಯಲ್ಲಿದ್ದ ಅವರು, ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.

ಗೋಪಾಲ್ ತುಂಬಾ ಸಮಯದವರೆಗೆ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆಯ ಹಿತ್ತಲಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sagara Farmer Suicide case 

Sagara Farmer Suicide case 
Sagara Farmer Suicide case 
shivamogga car decor sun control house
shivamogga car decor sun control house
END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.