ಸಾಗರದಲ್ಲಿ ಕಳೆನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಹಂಚಿಕೊಳ್ಳಿ
WhatsApp Facebook X Telegram
Shivamogga
Shivamogga

Sagara news today  

ಸಾಗರ: ತಾಲ್ಲೂಕಿನ ಜನ್ನತ್ ನಗರದಲ್ಲಿ ವ್ಯಕ್ತಿಯೊಬ್ಬರು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಜನ್ನತ್ ನಗರದ ನಿವಾಸಿ ಇಬ್ರಾಹಿಂ ಎಂದು ಗುರುತಿಸಲಾಗಿದೆ.

ಇಬ್ರಾಹಿಂ ಅವರು ಕಾಲಿನ ಸ್ವಾಧೀನ ಕಳೆದುಕೊಂಡಿದ್ದರು. ಹೀಗಾಗಿ, ಅವರು ತ್ರಿಚಕ್ರ ಸೈಕಲ್ ಬಳಸಿಕೊಂಡು ಸಣ್ಣಪುಟ್ಟ ವ್ಯಾಪಾರ ಹಾಗೂ ಇನ್ನಿತರ ವ್ಯವಹಾರಗಳನ್ನು ನಿರ್ವಹಿಸಿ ಕುಟುಂಬವನ್ನು ಸಾಕುತ್ತಿದ್ದರು. ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ತೀವ್ರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬದ ಸದಸ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor