SHIVAMOGGA NEWS TODAY

ಸಾಗರ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸ್​​ ವಶಕ್ಕೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಸಾಗರ : ಶಿವಮೊಗ್ಗ ಜಿಲ್ಲೆಯಾದ್ಯಂತ ಗಾಂಜಾ ಪ್ರಕರಣಗಳು ದಿನ ಕಳೆದಂತೆ ಹೆಚ್ಚಾಗ್ತಾ ಇದೆ. ಈ ಹಿನ್ನೆಲೆ ಪೊಲೀಸರು ಗಾಂಜಾ ಸೇವನೆ ಮಾಡುತ್ತಿರುವವರ ವಿರುದ್ದ ಅನೇಕ ಸ್ವಯಂ ಪ್ರೇರಿತ ಕೇಸ್​ಗಳನ್ನು ದಾಖಲಿಸಿಕೊಂಡು ಗಾಂಜಾ ಕುರಿತಾಗಿ ಅರಿವು ಮೂಡಿಸುತ್ತಿದ್ದಾರೆ. ಇದರ ನಡುವೆ ಸಾಗರ ಟೌನ್ ಪೊಲೀಸರು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ: ತುಪ್ಪೂರು ಬಳಿ ಅಪರಿಚಿತ ಶವ ಪತ್ತೆ; ವಾರಸುದಾರರ ಪತ್ತೆಗೆ ಪೊಲೀಸರ ಮನವಿ

ಮಾರ್ಚ್​​ 10  ರಂದು ಸಾಗರದ ಎಸ್.ಎನ್. ನಗರದ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟವಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಾಗರ ಟೌನ್ ಪೊಲೀಸರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿ ಸ್ಥಳದ ಮೇಲೆ ದಾಳಿ ಮಾಡಿದರು. 

ದಾಳಿಯ ವೇಳೆ ಇರ್ಫಾನ್ ಮತ್ತು ಮೊಹಮ್ಮದ್ ಇರ್ಫಾತ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇವರಿಂದ ಅಂದಾಜು 25,000 ರೂ. ಮೌಲ್ಯದ 430 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. 

Sagara Police Arrest Two Men for Selling Ganja

 Sagara PoliceShimoga Court Shivamogga Careers Ripponpete Shivamogga Unknown Body Found Near Tuppur Hybrid Vegetable Seeds Shikaripura Laborer Dies Shivamogga Court Bhadravati Court Unidentified Man Soraba Ghana Detains Bhadravathi Arson Anandapura Shivamogga Shivaratri Rules Swathantryada Ota Court Orders Walk-in Interview Shivamogga Court KFD Fatality Shivamogga Round up
Sagara Police
shivamogga car decor sun control house
shivamogga car decor sun control house
END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.