SHIVAMOGGA NEWS / Malenadu today/ Nov 28, 2023 | Malenadutoday.com
SHIVAMOGGA | ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ನಿನ್ನೆ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು
ಈಈ ವರ್ಷದ ಶೈಕ್ಷಣಿಕ ತರಗತಿಗಳು ಇಲ್ಲಿವರೆಗೂ ಆರಂಭವಾಗಿಲ್ಲ ಎಂದು ಆರೋಪಿಸಿ ನಿನ್ನೆ ಆಕ್ರೋಶ ವ್ಯಕ್ತಪಡಿಸಿದ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಬಿ.ಎಚ್.ರಸ್ತೆಗಿಳಿದು ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಕುವೆಂಪು ವಿವಿ
ಇತ್ತೀಚೆಗೆ ಇದೇ ವಿಚಾರದಲ್ಲಿ ತರಗತಿಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು ನಿನ್ನೆ ರಸ್ತೆ ತಡೆ ನಡೆಸಿ ಧರಣಿ ನಡೆಸಿದರು. ಕಾಲೇಜು ಆರಂಭವಾಗಿ ತಿಂಗಳೇ ಕಳೆದರೂ ಇನ್ನೂ ಸಹ ಯಾವೊಂದು ಕ್ಲಾಸ್ ಆರಂಭವಾಗಿಲ್ಲ ಎಂಬುದು ವಿದ್ಯಾರ್ಥಿಗಳ ಅಳಲಾಗಿದೆ. ಈ ಬಗ್ಗೆ ಹಲವು ಬಾರಿ ಕುವೆಂಪು ವಿವಿಗೆ (kuvempu vv) ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.
READ : ಕುವೆಂಪು ವಿವಿಯಿಂದಲೇ ಆಯ್ತಾ ಯಡವಟ್ಟು!? ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದೇಕೆ?
ಅತಿಥಿ ಉಪನ್ಯಾಸಕರು
ಸೆ.9ರಿಂದ ಕಾಲೇಜು ಆರಂಭವಾದರೂ ಶೈಕ್ಷಣಿಕ ವರ್ಷ ಆರಂಭವಾಗಿಲ್ಲ. ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲ. ಈ ಬಗ್ಗೆ ಸ್ಪಷ್ಟನೆಯು ಸಿಗುತ್ತಿಲ್ಲ ಎಂಬುದು ವಿದ್ಯಾರ್ಥಿಗಳ ಆಕ್ರೋಶವಾಗಿದೆ.
