sahyadri Science College ನವೆಂಬರ್ 22 ರಂದು ನಮ್ಮ ಸಹ್ಯಾದ್ರಿ ನಮ್ಮ ಹೆಮ್ಮೆ-2025 ಕಾರ್ಯಕ್ರಮಶಿವಮೊಗ್ಗ : ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನವೆಂಬರ್ 22ರ ಶನಿವಾರದಂದು ನಮ್ಮ ಸಹ್ಯಾದ್ರಿ ನಮ್ಮ ಹೆಮ್ಮೆ-2025″ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಸಂಘದ ಅಧ್ಯಕ್ಷರಾದ ರಾಜೇಶ್ವರಿ ಅವರು, ಈ ಕಾರ್ಯಕ್ರಮದಲ್ಲಿ 1000 ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಈ ಸಮ್ಮೇಳನವು ಹಿರಿಯ ವಿದ್ಯಾರ್ಥಿಗಳ ಹಳೆಯ ನೆನಪುಗಳನ್ನು ಸವಿಯುವುದರ ಜೊತೆಗೆ, ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸಹಕಾರ ನೀಡುವ ಮುಖ್ಯ ಉದ್ದೇಶವನ್ನು ಹೊಂದಿದೆ. ಅಂದು ಬೆಳಿಗ್ಗೆ 10:30ಕ್ಕೆ ಆರಂಭವಾಗಲಿರುವ ಕಾರ್ಯಕ್ರಮವನ್ನು ಕುವೆಂಪು ವಿಶ್ವವಿದ್ಯಾಲಯದ ವೈಸ್ ಚಾನ್ಸಲರ್ ಪ್ರೊ. ಶರತ್ ಅನಂತ್ ಮೂರ್ತಿ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕ್ರೀಡಾ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಮತ್ತು ಕ್ರಿಯಾಶೀಲವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

