MALNAD SUDDI

ನವೆಂಬರ್ 22 ರಂದು ನಮ್ಮ ಸಹ್ಯಾದ್ರಿ ನಮ್ಮ ಹೆಮ್ಮೆ-2025 ಕಾರ್ಯಕ್ರಮ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

sahyadri Science College  ನವೆಂಬರ್ 22 ರಂದು ನಮ್ಮ ಸಹ್ಯಾದ್ರಿ ನಮ್ಮ ಹೆಮ್ಮೆ-2025 ಕಾರ್ಯಕ್ರಮಶಿವಮೊಗ್ಗ :  ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನವೆಂಬರ್ 22ರ ಶನಿವಾರದಂದು ನಮ್ಮ ಸಹ್ಯಾದ್ರಿ ನಮ್ಮ ಹೆಮ್ಮೆ-2025″ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ  ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಸಂಘದ ಅಧ್ಯಕ್ಷರಾದ ರಾಜೇಶ್ವರಿ ಅವರು, ಈ ಕಾರ್ಯಕ್ರಮದಲ್ಲಿ 1000 ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಈ ಸಮ್ಮೇಳನವು ಹಿರಿಯ ವಿದ್ಯಾರ್ಥಿಗಳ ಹಳೆಯ ನೆನಪುಗಳನ್ನು ಸವಿಯುವುದರ ಜೊತೆಗೆ, ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸಹಕಾರ ನೀಡುವ ಮುಖ್ಯ ಉದ್ದೇಶವನ್ನು ಹೊಂದಿದೆ. ಅಂದು ಬೆಳಿಗ್ಗೆ 10:30ಕ್ಕೆ ಆರಂಭವಾಗಲಿರುವ ಕಾರ್ಯಕ್ರಮವನ್ನು ಕುವೆಂಪು ವಿಶ್ವವಿದ್ಯಾಲಯದ ವೈಸ್ ಚಾನ್ಸಲರ್ ಪ್ರೊ. ಶರತ್ ಅನಂತ್ ಮೂರ್ತಿ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕ್ರೀಡಾ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಮತ್ತು ಕ್ರಿಯಾಶೀಲವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

sahyadri Science College

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.