SHIVAMOGGA NEWS TODAY

ಸಕ್ರೆಬೈಲಿನ ಭೀಷ್ಮ ಆನೆಯ ಮಾವುತ ಸಿದ್ದಿಕ್​​ ಪಾಷಾ ಅನಾರೋಗ್ಯದಿಂದ ಸಾವು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಸಕ್ರೆಬೈಲಿನ ಆನೆ ಬಿಡಾರದಲ್ಲಿ ಭೀಷ್ಮ ಎಂಬ ಆನೆಯ ಮಾವುತರೊಬ್ಬರು ಅನಾರೋಗ್ಯದಿಂದ ನಿನ್ನೆ ಸಂಜೆ ಸಾವನ್ನಪ್ಪಿದ್ದಾರೆ. ಸಕ್ರೆಬೈಲಿನ ಸಿದ್ದಿಕ್ ಪಾಷಾ (39) ಮೃತಪಟ್ಟ ಮಾವುತರಾಗಿದ್ದಾರೆ.

ಘಟನೆಯ ವಿವರ

ಸಿದ್ದಿಕ್ ಪಾಷಾರವರು ಈ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದರು, ಅಷ್ಟೇ ಅಲ್ಲದೆ ಅದಕ್ಕೆ ಚಿಕಿತ್ಸೆಯನ್ನು ಸಹ ಪಡೆದು ಬಂದಿದ್ದರು. ಆದರೆ ಕೆಲ ದಿನಗಳ ಹಿಂದೆ ಅವರಿಗೆ ಮತ್ತೊಮ್ಮೆ ಆರೋಗ್ಯ ಸಮಸ್ಯೆ ಬಾಧಿಸಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯಲು ಮುಂದಾಗಿದ್ದರು. ಆದರೆ ಅಲ್ಲಿ ಗುಣಮುಖರಾಗದ ಕಾರಣ, ವೈದ್ಯರು ಮಾವುತರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲಿ ಮಾವುತ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಾವುತರ ಈ ಅನಿರೀಕ್ಷಿತ ಸಾವಿನಿಂದಾಗಿ ಸಕ್ರೆಬೈಲಿನ ಮಾವುತರು, ಕಾವಾಡಿಗಳು ಹಾಗೂ ಸಿಬ್ಬಂದಿಗಳು ಕಂಬನಿ ಮಿಡಿದಿದ್ದಾರೆ.

Sakrebailu Elephant Camp Mahout Passes Away

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.