ಶಿವಮೊಗ್ಗ : ಸಕ್ರೆಬೈಲು ಆನೆ ಬಿಡಾರಕ್ಕೆ ಪಶುವೈದ್ಯರ ನೇಮಕ: ಅ.17ಕ್ಕೆ ನೇರ ಸಂದರ್ಶನ

ಹಂಚಿಕೊಳ್ಳಿ
WhatsApp Facebook X Telegram
Shivamogga Job ಸಾಂದರ್ಭಿಕ ಚಿತ್ರ
Shivamogga Jobಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ ಪ್ರಸಿದ್ಧ ಸಕ್ರೆಬೈಲು ಆನೆ ಬಿಡಾರದ ಆನೆಗಳ ಆರೈಕೆ, ಚಿಕಿತ್ಸೆ ಹಾಗೂ ವನ್ಯಜೀವಿ ರಕ್ಷಣಾ ಕಾರ್ಯಗಳಿಗಾಗಿ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರೊಬ್ಬರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಅಕ್ಟೋಬರ್ 16 ರವರೆಗೆ ವಿಸ್ತರಿಸಲಾಗಿದೆ.

ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಿಸಿರುವಂತೆ, ಈ ಹುದ್ದೆಯು ತುರ್ತು ಸಂದರ್ಭಗಳಲ್ಲಿ ವನ್ಯಪ್ರಾಣಿಗಳಿಗೆ ಚಿಕಿತ್ಸೆ ನೀಡುವುದು, ಮರಣೋತ್ತರ ಪರೀಕ್ಷೆ ನಡೆಸುವುದು ಹಾಗೂ ಮಾನವ-ವನ್ಯಪ್ರಾಣಿ ಸಂಘರ್ಷದ ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸುವ ಜವಾಬ್ದಾರಿಯನ್ನು ಹೊಂದಿರುತ್ತದೆ.ಅರ್ಜಿದಾರರು ಬ್ಯಾಚಲರ್ ಆಫ್ ವೆಟರ್ನರಿ ಸೈನ್ಸ್ & ಅನಿಮಲ್ ಹಸ್ಬ್ಯಂಡರಿ (B.V.Sc & A.H)  ಪದವಿ ಪಡೆದಿರಬೇಕು. ವನ್ಯಜೀವಿ ವಿಷಯದಲ್ಲಿ ಸ್ನಾತಕೋತ್ತರ ಪಶುವೈದ್ಯಕೀಯ ಪದವಿ (ಪೋಸ್ಟ್ ಗ್ರಾಜ್ಯುಯೇಷನ್) ಪಡೆದವರಿಗೆ ಹಾಗೂ ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ವನ್ಯಜೀವಿ ಕ್ಷೇತ್ರ ಅಥವಾ ಮೃಗಾಲಯಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. 

ಆಸಕ್ತರು ತಮ್ಮ ಸ್ವಯಂ ವಿವರಗಳ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ಅ.17 ರಂದು ಬೆಳಿಗ್ಗೆ 10 ಗಂಟೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ,ವನ್ಯಜೀವಿ ವಿಭಾಗ ಶಿವಮೊಗ್ಗ ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.ಅರ್ಜಿ ನಮೂನೆಯನ್ನು ಶಿವಮೊಗ್ಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಿಂದ ಅಥವಾ https://sakrebailuelephantcamp.org/ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. 

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ: 08182-222983, ಸಿ.ಬಿ.ಗುರುರಾಜ್ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 9481461553, ಅಂಥೋಣಿ ರೇಗೊ, ವಲಯ ಅರಣ್ಯಾಧಿಕಾರಿ: 9632848453 ಇವರನ್ನು ಸಂಪರ್ಕಿಸಬಹುದೆಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor