SHIVAMOGGA NEWS TODAY

ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಪಶುವೈದ್ಯರ ನೇಮಕ: ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ ಗೊತ್ತಾ ? 

Shivamogga malenadu toda image
Shivamogga
ಶೇರ್ ಮಾಡಿ WhatsApp Facebook X

Sakrebailu elephant camp ಶಿವಮೊಗ್ಗ; ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡುವ ಸಲುವಾಗಿ, ಶಿವಮೊಗ್ಗ ವೃತ್ತ ವ್ಯಾಪ್ತಿಯಲ್ಲಿ ವನ್ಯಪ್ರಾಣಿಗಳು ಮೃತಪಟ್ಟಾಗ ಮರಣೋತ್ತರ ಪರೀಕ್ಷೆ, ವನ್ಯಪ್ರಾಣಿ ಮತ್ತು ಮಾನವ ಸಂಘರ್ಷದ ಸಂದರ್ಭದಲ್ಲಿ ಮತ್ತು ಇನ್ನಿತರೆ ತುರ್ತು ಸಂದರ್ಭದಲ್ಲಿ ವನ್ಯಪ್ರಾಣಿಗಳ ರಕ್ಷಣಿ ಮತ್ತು ಸ್ಥಳಾಂತರ ಕಾರ್ಯಗಳನ್ನು ತ್ವರಿತವಾಗಿ ಪರಿಸ್ಥಿತಿಗಳನ್ನು ನಿಭಾಯಿಸಲು 01 ಪಶುವೈದ್ಯರ ಅವಶ್ಯಕತೆ ಇದ್ದು, ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ಪಶುವೈದ್ಯರ ಹುದ್ದೆಗೆ Bachelor of veterinary science & Animal husbandry  ಶಿಕ್ಷಣವನ್ನು ಹೊಂದಿರುವ ಜೊತೆಗೆ ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ವನ್ಯಜೀವಿ ಕ್ಷೇತ್ರ / ಮೃಗಾಲಯ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಪಡೆದಿರುವ, ವನ್ಯಜೀವಿ ವಿಷಯದಲ್ಲಿ ಸ್ನಾತಕೋತ್ತರ ಪಶುವೈದ್ಯಕೀಯ ಪದವಿ ಪಡೆದಿರುವ ಪಶುವೈದ್ಯರು ದಿ:06.07.2026 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸುವುದು. ಜು.02 ರೊಳಗೆ ಸ್ವಯಂ ವಿವರಗಳೊಂದಿಗೆ ಅವಶ್ಯಕವಾದ ಪೂರಕ ದಾಖಲಾತಿಗಳನ್ನು ಅಂಚೆ ಮೂಲಕ ಅಥವಾ ಮುದ್ದಾಂ ಈ ಕಚೇರಿಗೆ ಸಲ್ಲಿಸುವಂತೆ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಅರ್ಜಿ ನಮೂನೆಗಾಗಿ ಅಥವಾ ಉಪ ಅರಣ್ಯ ಸಂರಕ್ಷಣಾಧಿಕಾರಿ. ವನ್ಯಜೀವಿ ವಿಭಾಗ ಕಛೇರಿ. ಶಿವಮೊಗ್ಗ ಅಥವಾ ವೆಬ್‌ಸೈಟ್ https://sakrebailuelephantcamp.org/ ಮೂಲಕ ಪಡೆಯುವುದು. 

ಹೆಚ್ಚಿನ ಮಾಹಿತಿಗೆ ದೂ. ಸಂ.: 08182-222983, ವಿಜಯ್‌ಕುಮಾರ್ ಕಾಳಪ್ಪನವರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ ಉಪ ವಿಭಾಗ, ಶಿವಮೊಗ್ಗ- ಮೊಬೈಲ್ ಸಂಖ್ಯೆ:- 9481461553. ವಿನಯ್ ಜೆ ಆರ್. ವಲಯ ಅರಣ್ಯಾಧಿಕಾರಿ, ಸಕ್ರೆಬೈಲು ವನ್ಯಜೀವಿ ವಲಯ, ಗಾಜನೂರು, 9663121406 ಇವರುಗಳನ್ನು ಸಂಪರ್ಕಿಸುವುದು.

Sakrebailu elephant camp wildlife vet recruitment

Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor