Santhosh balaraj ಯುವ ನಟ ಸಂತೋಷ್ ಬಾಲರಾಜ್ ಇನ್ನಿಲ್ಲ
ಬೆಂಗಳೂರು: ‘ಗಣಪ’, ಕರಿಯ 2 ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ (34) ಅವರು ನಿಧನರಾಗಿದ್ದಾರೆ. ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಕಳೆದ ತಿಂಗಳು ಕಾಮಾಲೆ ರೋಗದಿಂದ ಬಳಲುತ್ತಿದ್ದ ಸಂತೋಷ್ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ, ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರದೃಷ್ಟವಶಾತ್, ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
