MALENADUTODAY.COM |SHIVAMOGGA| #KANNADANEWSWEB
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವಿಐಎಸ್ಎಲ್ (save visl ) ಕಾರ್ಖಾನೆಯನ್ನು ಉಳಿಸಲು ಇನ್ನಷ್ಟು ಹೋರಾಟ ತೀವ್ರಗೊಳ್ಳುತ್ತಿದೆ. ಅಲ್ಲದೆ ಹೋರಾಟಗಾರರು ಸ್ವಾಮೀಜಿಗಳ ಮೊರೆಹೋಗುತ್ತಿದ್ದಾರೆ. ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳಲ್ಲಿ ಈ ಬಗ್ಗೆ ಮನವಿ ಮಾಡಿದ್ದ ಹೋರಾಟಗಾರರು, ಇದೀಗ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಜಗದ್ಗುರುಗಳು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರಿಗೆ ವಿಐಎಸ್ಲ್ ಉಳಿಸುವಂತೆ ಮನವಿ ಮಾಡಿದ್ದಾರೆ.
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ಹೋರಾಟ ನಡೆಸ್ತಿದ್ದಾರೆ. ಇನ್ನೂ ಈ ಹೋರಾಟಕ್ಕೆ ಶಿವಮೊಗ್ಗ ಜಿಲ್ಲೆ ವೀರಶೈವ ಲಿಂಗಾಯತ ಮಠಾಧೀಶರ ಮಹಾಸಭಾ ವತಿಯಿಂದ ವಿವಿಧ ಮಠಗಳ ಸ್ವಾಮೀಜಿಗಳು ಬೆಂಬಲ ಸೂಚಿಸಿದ್ದರು.
READ |BREAKING NEWS : ಶಿವಮೊಗ್ಗದಲ್ಲಿ ಮತ್ತಿಬ್ಬರ ಮೇಲೆ ಗೂಂಡಾ ಕಾಯ್ದೆ (gunda act) ಜಾರಿ! ವರ್ಷವಿಡಿ ಜೈಲು ಗ್ಯಾರಂಟಿ!
ಇದರ ನಡುವೆ ಗುತ್ತಿಗೆ ಕಾರ್ಮಿಕರ ನಿಯೋಗ ಶ್ರೀ ಕ್ಷೇತ್ರ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಜಗದ್ಗುರುಗಳಾದ ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರಿಗೆ ಕಾರ್ಖಾನೆ ಉಳಿವಿಗಾಗಿ ಮನವಿ ಸಲ್ಲಿಸಿದೆ. ನವಿಗೆ ಸ್ಪಂದಿಸಿರುವ ಜಗದ್ಗುರುಗಳು ಮಾ.5 ರಂದು ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಗಮಿಸಲಿದ್ದು, ಕಾರ್ಖಾನೆ ಉಳಿಸುವಂತೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು.
READ | *BREAKING NEWS : ಅನೈತಿಕ ಸಂಬಂಧ ಅಪರಾಧಕ್ಕೆ ಹಾದಿ! ತಾಯಿ ಜೊತೆಗಿದ್ದ ವ್ಯಕ್ತಿಯನ್ನ ಹೊಡೆದು ಕೊಂದ ಮಗ! ಶಿರಾಳಕೊಪ್ಪ ಕೇಸ್!*
ಹೋರಾಟ ಹತ್ತಿಕ್ಕುವ ಯತ್ನ
ಈ ಮಧ್ಯೆ ಹೋರಾಟ ತೀವ್ರಗೊಳ್ಳುತ್ತಿರುವಂತೆಯೇ ಭದ್ರಾವತಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನಗಳು ಸಹ ಜೋರಾಗಿ ನಡೆಯುತ್ತಿವೆ. ಪ್ರತಿಭಟನೆಯನ್ನೆ ಮೊಟಕುಗೊಳಿಸುವ ಪ್ರಯತ್ನಕ್ಕೆ ರಾಜಕೀಯ ಪಕ್ಷಗಳು ಮುಂದಾಗಿವೆ ಎನ್ನಲಾಗುತ್ತಿದೆ.
ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ಯಾ? ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಳ್ಳುತ್ತಿದೆ ಕ್ರಮ! ಏನದು ? ವಿವರ ಇಲ್ಲಿದೆ ಓದಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #
