MALENADUTODAY.COM | SHIVAMOGGA NEWS
ಶಿವಮೊಗ್ಗ ಏರ್ಪೋರ್ಟ್ (SHIVAMOGGA AIRPORT) ಉದ್ಘಾಟನೆ ಕುರಿತಾಗಿ ಮಾತನಾಡ್ತಾ ನಿನ್ನೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಸರ್ಕಾರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಕೆಲಸ ನಡೆಯುತ್ತದೆ. ವಿಐಎಸ್ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗೊಳ್ಳಲಾಗುವುದು ಎಂದಿದ್ದಾರೆ.
ಪ್ರವಾಸಿ ಮಂದಿರದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದ ಅವರು, ಈ ಕುರಿತಾಗಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದಾಗಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ VISL ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ. ಫೆಬ್ರವರಿ 27ರ ಮುನ್ನ ರಾಜ್ಯ ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಿದೆ. ಫೆ.27ರಂದು ಏರ್ಪೋರ್ಟ್ ಉದ್ಘಾಟನೆಗೆ ಪಿಎಂ ಮೋದಿ ಬರುತ್ತಾರೆ ಎಂದು ಹೇಳಿದರು.
ಏರ್ಫೋರ್ಟ್ಗೆ ಬಿಎಸ್ವೈ ಹೆಸರು
ಇನ್ನೂ ಶಿವಮೊಗ್ಗ ಏರ್ಪೋರ್ಟ್ಗೆ (Shimoga airport) ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ಧಾರೆ. ಬಿಎಸ್ವೈ ಪರಿಶ್ರಮದಿಂದ ವಿಮಾನ ನಿಲ್ದಾಣ ನಿರ್ಮಾಣ ಆಗಿದೆ. ಪ್ರಧಾನಿ ನರೇಂದ್ರ ಮೋದಿ (NARENDRA MODI) ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ ಮಾಡ್ತಾರೆ ಎಂದರು
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com