SHIVAMOGGA | MALENADUTODAY NEWS | ಮಲೆನಾಡು ಟುಡೆ Nov 22, 2024
ಇತ್ತೀಚೆಗೆ ರಾಜ್ಯಸರ್ಕಾರ, ಎಸ್‌ಸಿ, ಎಸ್‌ಟಿಯವರ ವಿರುದ್ದದ ದೌರ್ಜನ್ಯ ಪ್ರಕರಣಗಳ ತನಿಖೆಗೆ ಎಲ್ಲಾ ಜಿಲ್ಲೆಗಳಲ್ಲಿಯು ಪ್ರತ್ಯೇಕ ಠಾಣೆ ಸ್ಥಾಪಿಸುವ ನಿರ್ಧಾರ ಕೈಗೊಂಡಿತ್ತು. ಅದರಂತೆ ಇದೀಗ ಎಸ್‌ಸಿ, ಎಸ್‌ಟಿಯವರ ವಿರುದ್ದ ದೌರ್ಜನ್ಯ ಪ್ರಕರಣ ಗಳ ತನಿಖೆಗೆ ರಾಜ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ (ಎಸ್‌ಇಆರ್‌ಇ) 33 ವಿಶೇಷ ಪೊಲೀಸ್ ಠಾಣೆಗಳನ್ನು ಸ್ಥಾಪಿಸಿ ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.
ಎಸ್ಸಿ-ಎಸ್ಟಿ ವಿರುದ್ದ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ದೂರು ದಾಖಲಿಸಿ ನಿಗದಿತ ಅವಧಿಯಲ್ಲಿ ಸೂಕ್ತ ತನಿಖೆ ನಡೆಸಲು ಎಸ್‌ಇಆರ್‌ಇ ಘಟಕದಲ್ಲಿ ವಿಶೇಷ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಜಿಲ್ಲೆಗೆ ಒಂದರಂತೆ ಹಾಗೂ ಬೆಂಗಳೂರಿನಲ್ಲಿ ಎರಡು ಸೇರಿದಂತೆ ಒಟ್ಟು 33 ಠಾಣೆಗಳನ್ನು ಸ್ಥಾಪಿಸಲಾಗಿದೆ. ಇವುಗಳ ನಿರ್ವಹಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ಸೇರಿ 450 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜೊತೆಯಲ್ಲಿ ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಅಧಿನಿಯಮ 1989ರ ಅನ್ವಯ ಪ್ರಕರಣಗಳನ್ನು ತನಿಖೆ ನಡೆಸಿ ಆರೋಪಿ ಗಳನ್ನು ಬಂಧಿಸಿ ವಿಚಾರಣೆ ನಡೆಸುವ ಅಧಿಕಾರವನ್ನು ನೀಡಲಾಗಿದೆ.

SUMMARY| social welfare department has ordered the setting up of 33 special police stations in the State Directorate of Civil Rights Enforcement (SERE) to investigate cases of atrocities against SCs and STs.
KEY WORDS | social welfare department, special police stations, State Directorate of Civil Rights Enforcement (SERE), atrocities against SCs and STs