ರೈಲು ಪ್ರಯಾಣಿಕರೇ ಗಮನಿಸಿ : ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲು ಸಂಚಾರದಲ್ಲಿ ವ್ಯತ್ಯಯ

schedule changes ಶಿವಮೊಗ್ಗ, malenadu today news : ನೈರುತ್ಯ ರೈಲ್ವೆ ಇಲಾಖೆ ಮೈಸೂರು ತಾಳಗುಪ್ಪ ಎಕ್ಸ್​ಪ್ರೆಸ್​ ರೈಲಿನ ಸಂಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆಯೊಂದನ್ನು ನೀಡಿದೆ. 

ರೈಲ್ವೆ ಇಲಾಖೆ ಪ್ರಕಟಣೆಯ ಪ್ರಕಾರ, ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲಿನ ಸಂಚಾರದಲ್ಲಿ 9 ದಿನಗಳ ಕಾಲ ಕೊಂಚ ವತ್ಯಾಸವಾಗಲಿದೆ. ಏಕೆಂದರೆ ಈ ರೈಲನ್ನು ಮಾರ್ಗ ಮಧ್ಯದಲ್ಲಿ 30 ನಿಮಿಷ ನಿಯಂತ್ರಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. 

ಹಾಸನ ಮತ್ತು ಕೋರವಂಗಲ ನಡುವೆ ಸುರಕ್ಷತೆಗೆ ಸಂಬಂಧಿಸಿದ ಮತ್ತು ಹಳಿ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.  

ಆಗಸ್ಟ್‌ 18, 19, 21, 22, 23, 25, 26, 28, 29 ರಂದು ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ಮಾರ್ಗದಲ್ಲಿ 30 ನಿಮಿಷಗಳ ಕಾಲ ವಿಳಂಬವಾಗಲಿದೆ ಎಂದು ಪ್ರಕಟಣೆಯಲ್ಲಿ ನೀಡಲಾಗಿದೆ. 

schedule changes

schedule changes

Leave a Comment