Scheduled Power Cut ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿ ಮೆಸ್ಕಾಂ (MESCOM) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ನವೆಂಬರ್ 14 ರಂದು (ಶುಕ್ರವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 02:00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
Scheduled Power Cut ಎಲ್ಲೆಲ್ಲಿ ಕರೆಂಟ್ ಇರಲ್ಲ
ಕೃಷ್ಣರಾಜೇಂದ್ರ ಕುಡಿಯುವ ನೀರಿನ ಘಟಕ (K.R. Drinking Water Unit), ಹಳೇ ಮಂಡ್ಲಿ, ಗಂಧರ್ವ ನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಸ್ ನಗರದ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಈ ಅವಧಿಯಲ್ಲಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

