school bus 21-06-25: ಶಿವಮೊಗ್ಗದಲ್ಲಿ  ಶಾಲಾ ವಾಹನಗಳ ದಿಢೀರ್ ತಪಾಸಣೆ | ಕಾರಣವೇನು

prathapa thirthahalli
Prathapa thirthahalli - content producer

school bus : ಶಿವಮೊಗ್ಗದಲ್ಲಿ  ಶಾಲಾ ವಾಹನಗಳ ದಿಢೀರ್ ತಪಾಸಣೆ | ಕಾರಣವೇನು

ಶಿವಮೊಗ್ಗ ನಗರದಲ್ಲಿ ಇಂದು (ಜೂನ್ 21) ಪೂರ್ವ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆಗಳ ಸಿಬ್ಬಂದಿ, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಚಾಲಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ತಪಾಸಣೆಯನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ನಗರದ ಪ್ರಮುಖ ವೃತ್ತಗಳು ಮತ್ತು ರಸ್ತೆಗಳಲ್ಲಿ ಶಾಲಾ ವಾಹನಗಳನ್ನು ತಡೆದು ಪರಿಶೀಲಿಸಲಾಯಿತು.

- Advertisement -

ಈ ಸಂದರ್ಭದಲ್ಲಿ, ಚಾಲಕರಿಗೆ ಹಲವು ಪ್ರಮುಖ ಸೂಚನೆಗಳನ್ನು ನೀಡಲಾಯಿತು. ನಿಗದಿತ ವೇಗದಲ್ಲಿ ವಾಹನ ಚಲಾಯಿಸುವುದು, ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು, ಹಾಗೂ ವಾಹನಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ಕರೆದೊಯ್ಯದಿರುವುದು ಸೇರಿದಂತೆ ಇತರೆ ಸೂಚನೆಗಳನ್ನು ನೀಡಲಾಗಿದೆ.

ಜೊತೆಗೆ, ವಾಹನಗಳಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳಾದ ವಿಮೆ (ಇನ್ಸೂರೆನ್ಸ್), ಹೊಗೆ ತಪಾಸಣೆ (ಪಲ್ಯೂಷನ್ ಸರ್ಟಿಫಿಕೇಟ್) ಮತ್ತು ಫಿಟ್‌ನೆಸ್ ಪ್ರಮಾಣಪತ್ರಗಳು (ಫಿಟ್‌ನೆಸ್ ಸರ್ಟಿಫಿಕೇಟ್) ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಪೊಲೀಸರು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

school bus ಖಾಸಗಿ ಶಾಲಾ ವಾಹನಗಳನ್ನು ಪರಿಶೀಲನೆ ನಡೆಸುತ್ತಿರುವ ಪೊಲೀಸರು
school bus ಖಾಸಗಿ ಶಾಲಾ ವಾಹನಗಳನ್ನು ಪರಿಶೀಲನೆ ನಡೆಸುತ್ತಿರುವ ಪೊಲೀಸರು
TAGGED:
Share This Article
1 Comment

Leave a Reply

Your email address will not be published. Required fields are marked *