school leave sagara hosanagara , malnad rain ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಸಾಗರ / ಇಂದು ಅಂದರೆ ಜೂನ್ 16, 2025 ರಂದು ಸಾಗರ ತಾಲ್ಲೂಕಿನಾದ್ಯಂತ ಧಾರಾಕಾರ ಮಳೆ ಮತ್ತು ಬಿರುಗಾಳಿ ಬೀಸುತ್ತಿರುವುದರಿಂದ, ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಆದೇಶ ಹೊರಡಿಸಿದ್ದಾರೆ.
ಈ ರಜೆಯ ಕಾರಣದಿಂದಾಗಿ ತಪ್ಪಿಹೋದ ತರಗತಿಗಳ ಪಠ್ಯಕ್ರಮವನ್ನು ಮುಂದಿನ ಅವಧಿಯಲ್ಲಿ ಸರಿದೂಗಿಸಿಕೊಳ್ಳುವಂತೆ ಸಾಗರ ತಹಶೀಲ್ದಾರ್ ಅವರು ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ. ಮಳೆಯ ತೀವ್ರತೆಯಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಹೊಸನಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ school leave sagara hosanagara
ಹೊಸನಗರ : ಇಂದು ಅಂದರೆ ಜೂನ್ 16, 2025 ರಂದು ಹೊಸನಗರ ತಾಲ್ಲೂಕಿನಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಂಗನವಾಡಿಗಳು, ಶಾಲೆಗಳು (ಪ್ರಾಥಮಿಕ ಮತ್ತು ಪ್ರೌಢ) ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಾನ್ಯ ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಹೊಸನಗರ ತಹಶೀಲ್ದಾರ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ಅಧಿಕೃತ ವೆಬ್‌ಸೈಟ್: IMD ವರದಿಗಳು
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA): ಸುರಕ್ಷತಾ ಮಾರ್ಗಸೂಚಿಗಳು
ಸ್ಥಳೀಯ ಸುದ್ದಿಗಳನ್ನು Malenadutoday.com ನಲ್ಲಿಯೂ ಸಹ ಓದಬಹುದು. Malenadutoday.com
school leave sagara hosanagara