school leave today in news /Shivamogga news / ಮುಂದುವರಿದ ಮಳೆ/ 2 ತಾಲ್ಲೂಕನಲ್ಲಿ ರಜೆ ಘೋಷಣೆ/ ಉಳಿದೆಡೆ ಈ ನಿಯಮ ಅನ್ವಯ!
Shivamogga news /ಹೊಸನಗರ ತಾಲ್ಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದಾಗಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು, ಜುಲೈ 4, 2025 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಈ ಆದೇಶವನ್ನು ಹೊರಡಿಸಿದ್ದಾರೆ.
ಸಾಗರ ತಾಲ್ಲೂಕಿನಲ್ಲಿಯೂ ಸಹ ಇಂದು (ಜುಲೈ 4, 2025) ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸಾಗರ ತಹಶೀಲ್ದಾರ್ ತಿಳಿಸಿದ್ದಾರೆ. ರಜೆಯ ದಿನಗಳಲ್ಲಿ ತಪ್ಪಿದ ತರಗತಿಗಳನ್ನು ಮುಂಬರುವ ರಜಾ ದಿನಗಳಲ್ಲಿ ನಡೆಸುವ ಮೂಲಕ ಸರಿಹೊಂದಿಸಲು ಶಾಲಾ-ಕಾಲೇಜುಗಳಿಗೆ ಸೂಚಿಸಲಾಗಿದೆ.
ಮಳೆ ಮುಂದುವರಿಯುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಸುರಕ್ಷಿತವಾಗಿರಲು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಸೂಚಿಸಲಾಗಿದೆ. ಈ ನಡುವೆ ತೀರ್ಥಹಳ್ಳಿಯಲ್ಲಿ ಆಯ್ದ ಶಾಲೆಗಳು ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗೆ ರಜೆ ಘೋಷಿಸಿದೆ. ಶಾಲೆಯ ಆಡಳಿತ ಮಂಡಳಿತ ತೀರ್ಮಾನದಂತೆ ರಜೆ ನೀಡಲಾಗುತ್ತಿದೆ.
ಸುದ್ದಿ ಅಪ್ಡೇಟ್
ಇತ್ತೀಚಿನ ಮಾಹಿತಿ ಪ್ರಕಾರ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎನ್ನಲಾಗಿದೆ
school leave today in news july 04
