school open today : ಶಾಲೆಗಳನ್ನು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಿಕ್ಷಕರು

ಹಂಚಿಕೊಳ್ಳಿ
WhatsApp Facebook X Telegram
school open today :
school open today :

school open today : ಶಾಲೆಗಳನ್ನು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಿಕ್ಷಕರು

2025-26ನೇ ಸಾಲಿನ ಶೈಕ್ಷಣಿಕ ವರ್ಷ ಇಂದಿನಿಂದ ಶುರುವಾಗಿದ್ದು, ರಾಜ್ಯದೆಲ್ಲೆಡೆ ಇಂದು ಶಾಲೆಗಳನ್ನು ತಳಿರು ತೋರಣ ರಂಗೋಲಿಯಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಶಿಕ್ಷಕರು ಸ್ವಾಗತಿಸಿದರು.

ಅದರಂತೆ ಇಂದು ಶಿವಮೊಗ್ಗದ ದುರ್ಗಿಗುಡಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಿದರು. ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಯನ್ನು ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿತ್ತು. ನಂತರ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕರು ಹಾಗೂ ಶಾಲಾ ಅಭಿವೃದ್ದಿ ಸಮಿತಿಯವರು ಶಾಲೆಗೆ ಸ್ವಾಗತ ಮಾಡಿದರು.ನಂತರ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಶಾಲಾ ಸಮವಸ್ತ್ರಗಳನ್ನು ವಿತರಿಸಿದರು. 

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor