Security instructions ಲಾಡ್ಜ್ ಹಾಗೂ ಕಲ್ಯಾಣ ಮಂಟಪಗಳ ಮಾಲಿಕರ ಜೊತೆ ಪೊಲೀಸರ ವಿಶೇಷ ಸಭೆ : ಕಾರಣವೇನು
Security instructions ಶಿವಮೊಗ್ಗ : ಮುಂಬರುವ ಗೌರಿ-ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದ ಲಾಡ್ಜ್ ಮತ್ತು ಕಲ್ಯಾಣ ಮಂಟಪಗಳ ಮಾಲೀಕರಿಗೆ ವಿಶೇಷ ಸಭೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಲಾಗಿದೆ.
ಶಿವಮೊಗ್ಗದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ನಡೆದ ಈ ಸಭೆಯ ನೇತೃತ್ವವನ್ನು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜಿ. ಕಾರ್ಯಪ್ಪ ಅವರು ವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು. ಲಾಡ್ಜ್ ಮತ್ತು ಕಲ್ಯಾಣ ಮಂಟಪಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾಗಳನ್ನು ಆಳವಡಿಸಬೇಕು. ಸಂಗ್ರಹವಾದ ದೃಶ್ಯಾವಳಿಗಳನ್ನು ಕನಿಷ್ಠ ಒಂದು ತಿಂಗಳವರೆಗೆ ಸಂಗ್ರಹಿಸಿಡಬೇಕು.
ಪ್ರವೇಶ ಮತ್ತು ನಿರ್ಗಮನ: ಪ್ರವೇಶ ಮತ್ತು ನಿರ್ಗಮನಕ್ಕೆ ಒಂದೇ ಗೇಟ್ ಇರಬೇಕು. ತಂಗುವ ಗ್ರಾಹಕರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಬೇಕು ಮತ್ತು ಪ್ರತಿ ವಾರ ಪೊಲೀಸ್ ಠಾಣೆಗೆ ಒದಗಿಸಬೇಕು. ಹೊರ ರಾಜ್ಯದ ಗ್ರಾಹಕರು ಬಂದಲ್ಲಿ ಅವರ ದಾಖಲೆಗಳ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ನಿರ್ವಹಿಸಬೇಕು.ಯಾವುದೇ ಸಂದೇಹಾಸ್ಪದ ವ್ಯಕ್ತಿಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112 ಸಹಾಯವಾಣಿಗೆ ಕರೆ ಮಾಡಬಹುದು.ಎಲ್ಲಾ ಆಗತ್ಯ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಅಲ್ಲದೆ, ಉತ್ತಮ ಸ್ವಚ್ಛತೆ ಮತ್ತು ನೀರಿನ ಟ್ಯಾಂಕ್‌ಗಳ ಶುಚಿತ್ವವನ್ನು ಪ್ರತಿದಿನ ಪರಿಶೀಲಿಸಬೇಕು.ಈ ಸಂದರ್ಭದಲ್ಲಿ dysp ಬಾಬು ಆಂಜನಪ್ಪ, dysp ಸಂಜೀವ್ ಕುಮಾರ್, ನಗರದ ಎಲ್ಲಾ ಪೊಲೀಸ್ ನಿರೀಕ್ಷಕರು ಲಾಡ್ಜ್ ಮತ್ತು ಕಲ್ಯಾಣ ಮಂಟಪಗಳ ಮಾಲೀಕರು ಉಪಸ್ಥಿತರಿದ್ದರು.
