KARNATAKA NEWS/ ONLINE / Malenadu today/ Sep 14, 2023 SHIVAMOGGA NEWS
ರಾಜ್ಯದಲ್ಲಿ ಮಳೆಯಿಲ್ಲದೇ ಬರದ ಛಾಯೇ ಮೂಡಿದೆ. ಇದರ ನಡುವೆ ಬರಗಾಲ ಪೀಡಿತ ಪ್ರದೇಶವೆಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಹೆಸರಿಸಬೇಕು ಎಂದು ಒತ್ತಾಯ ಕೇಳಿಬಂದಿತ್ತು. ಈ ಮಧ್ಯೆ ರಾಜ್ಯಸರ್ಕಾರ ಬರ ಪೀಡಿತ ಪ್ರದೇಶಗಳ ಪಟ್ಟಿ ಬಿಡುಗಡೆ ವಿಳಂಬ ಮಾಡಿತ್ತು. ಇದೀಗ ಬರ ಪೀಡಿತ ಪ್ರದೇಶಗಳ ಪಟ್ಟಿ ಬಿಡುಗಡೆಯಾಗಿದೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ನೇತೃತ್ವದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಸಂಪುಟ ಉಪ ಸಮಿತಿ ಸಭೆ ನಿನ್ನೆ ಬೆಂಗಳೂರಿನಲ್ಲಿ ನಡೆದಿದೆ. ಈ ವೇಳೆ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಅಲ್ಲದೆ ಬರದ ನಿರ್ವಹಣೆ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆಗಳನ್ನು ನೀಡಿದೆ. ಇನ್ನೂ ಈ ಪಟ್ಟಿಯಲ್ಲಿ ಶಿವಮೊಗ್ಗದ ಏಳು ತಾಲ್ಲೂಕುಗಳನ್ನು ನಮೂದಿಸಲಾಗಿದೆ. ಶಿವಮೊಗ್ಗ, ಭದ್ರಾವತಿ, ಹೊಸನಗರ, ಸಾಗರ, ಸೊರಬ
ತೀರ್ಥಹಳ್ಳಿ, ಬರಪೀಡಿತ ಪಟ್ಟಿಯಲ್ಲಿದೆ.
ಮುಂದೇನು
ಸದ್ಯ ಸಚಿವರ ಸಮಿತಿಯು ಈ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯರಿಗೆ ನೀಡಲಿದೆ. ಸಂಪುಟ ಸಭೆಯಲ್ಲಿ ಪಟ್ಟಿ ಅನುಮೋದನೆ ಪಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಹೊರತಾಗಿ ಇವತ್ತು ಸಿಎಂ ಸಿದ್ದರಾಮಯ್ಯರವರೇ ಅಧಿಕೃತವಾಗಿ ಬರ ಪೀಡಿತ ತಾಲ್ಲುಕುಗಳ ಘೋಷಣೆ ಮಾಡುವ ಸಾಧ್ಯತೆ ಇದೆ.
ಇನ್ನಷ್ಟು ಸುದ್ದಿಗಳು
ಶಿವಮೊಗ್ಗ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ! ಯಾವಾಗ ಸಂಚರಿಸಲಿದೆ ಬಹುನಿರೀಕ್ಷಿತ ಟ್ರೈನ್?
ಗಣೇಶೋತ್ಸವ ಹಾಗೂ ಈದ್ ಮಿಲಾದ್ ! ಸೌಹಾರ್ದ ಸಭೆಯಲ್ಲಿ ಸಚಿವರು & ಶಾಸಕರ ಒಂದೇ ಮಾತು! ಏನೇನು ನಡೀತು ವಿವರ ಇಲ್ಲಿದೆ

