2019 ನೇ ಸಾಲಿನಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಾಯಿ ನೀಡಿದ್ದರು. ಈ ದೂರಿನ ಮೇರೆಗೆ ತೀರ್ಥಹಳ್ಳಿಯ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಪ್ರಕರಣದ ತೀರ್ಪು ಹೊರಬಿದ್ದಿದೆ.
ಪ್ರಕರಣ ಸಂಬಂಧ ತನಿಖಾಧಿಕಾರಿಗಳಾದ ಜಿ.ವಿ. ಗಣೇಶಪ್ಪ, ಪೊಲೀಸ್ ವೃತ್ತ ನಿರೀಕ್ಷಕರು, ತೀರ್ಥಹಳ್ಳಿ ವೃತ್ತ (ಹಾಲಿ ನಿವೃತ್ತಿ) ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿತ್ತು.
ವಿಚಾರಣೆ ಮುಗಿದಿದ್ದು, ನಿನ್ನೆ 27-01-2023 ರಂದು ನ್ಯಾಯಧೀಶರಾದ ಮಾನು ಕೆ. ಎಸ್ ರವರು ತೀರ್ಪು ಪ್ರಕಟಿಸಿದ್ದಾರೆ. ಆರೋಪಿತನ ವಿರುದ್ಧ ಕಲಂ 376(1), 506 ಮತ್ತು 450 IPC ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ 37 ವರ್ಷದ ಯುವಕನಿಗೆ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 57,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
