POLITICS

ಸಾಗರದಲ್ಲಿ ಬೃಹತ್ ಪ್ರತಿಭಟನೆ; ಶಿವಮೊಗ್ಗದಿಂದ 60 ಬಸ್‌ಗಳಲ್ಲಿ ಸಾವಿರಾರು ಜನ ಭಾಗಿ! ಕಾರಣವೇನು?

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ರಾಷ್ಟ್ರಭಕ್ತರ ಬಳಗ ಹಾಗೂ ಪರಿಸರಕ್ಕಾಗಿ ನಾವು ಸಂಘಟನೆಗಳ ವತಿಯಿಂದ ಜೂನ್ 28 ರಂದು ಸಾಗರದ ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಇ. ಕಾಂತೇಶ್ ತಿಳಿಸಿದರು.

ಶಿವಮೊಗ್ಗ-ತಾಳಗುಪ್ಪ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ: ಎಲ್ಲಿಯವರೆಗೆ ಗೊತ್ತಾ ?

ನಗರದ ಪತ್ರಿಕಾ ಭವನದಲ್ಲಿ ಇಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ದಿನಗಳಿಂದ ನಾವು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದೇವೆ. ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್ನಲ್ಲಿ ಈ ಯೋಜನೆಗಾಗಿ ಬರೋಬ್ಬರಿ 15 ಸಾವಿರ ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದೆ. ಯಾರೋ ಕೆಲವರ ವೈಯಕ್ತಿಕ ಲಾಭಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ವೆಚ್ಚ ಮಾಡುವ ಮೂಲಕ ಸಾರ್ವಜನಿಕರ ಮೇಲೆ ಅನಗತ್ಯ ಹೊರೆ ಹೇರಲಾಗುತ್ತಿದೆ. ಆದ್ದರಿಂದ, ಈ ಜನವಿರೋಧಿ ಯೋಜನೆಯನ್ನು ಖಂಡಿಸಿ ಈ ಬಾರಿ ಅತ್ಯಂತ ಬೃಹತ್ ಪ್ರಮಾಣದ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತಿದ್ದೇವೆ, ಎಂದರು.

ಜೂನ್ 28ರ ಬೆಳಿಗ್ಗೆ ಶಿವಮೊಗ್ಗ ನಗರದ ಶುಭಮಂಗಳ ಕಲ್ಯಾಣ ಮಂಟಪದ ಆವರಣದಿಂದ ಸುಮಾರು 60 ಬಸ್‌ಗಳ ಮೂಲಕ ಸಾವಿರಾರು ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ಈ ಹೋರಾಟದಲ್ಲಿ ಭಾಗವಹಿಸಲು ಸಾಗರಕ್ಕೆ ತೆರಳಲಿದ್ದಾರೆ. ಮೊದಲು ಸಾಗರದ ಗಾಂಧಿ ವೃತ್ತದಲ್ಲಿ ಸಾಂಕೇತಿಕವಾಗಿ ಬೃಹತ್ ಪ್ರತಿಭಟನೆ ನಡೆಸಿ, ಬಳಿಕ ಅಲ್ಲಿಂದ ಕಾರ್ಗಲ್‌ನಲ್ಲಿರುವ KPC ಕಚೇರಿಗೆ ತೆರಳಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಮುಂದುವರಿಸಬಾರದು ಎಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಗುವುದು. ಈ ಹೋರಾಟದಲ್ಲಿ ಶ್ರೀ ಮಾರುತಿ ಗುರೂಜಿ ಅವರು ಸಹ ಭಾಗವಹಿಸಲಿದ್ದಾರೆ, ಎಂದು ಕಾಂತೇಶ್ ಮಾಹಿತಿ ನೀಡಿದರು.

Sharavathi Project Protest Mega Rally in Sagara

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.