ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಹೈಕೋರ್ಟ್ ಬ್ರೇಕ್? ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

ಹಂಚಿಕೊಳ್ಳಿ
WhatsApp Facebook X Telegram
Bengaluru High Court Sharavathi Pumped Storage Project Legal Issue
Bengaluru High Court Sharavathi Pumped Storage Project Legal Issue

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಯೋಜನೆಯ ಅನುಮೋದನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. 

ಶಿವಮೊಗ್ಗದಲ್ಲಿ ಗಾಂಜಾ ಹಾವಳಿ ಹಾಗೂ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ವಿಎಚ್‌ಪಿ ಎಚ್ಚರಿಕೆ

Sharavathi Pumped Storage ಅರ್ಜಿದಾರರ ವಾದವೇನು

ಸಾಗರದ ಅಖಿಲೇಶ್ ಚಿಪ್ಪಿ, ಉಡುಪಿಯ ಡಾ. ರವೀಂದ್ರನಾಥ ಶಾನಬಾಗ್ ಮತ್ತು ಶಿವಮೊಗ್ಗದ ಸಿ.ಬಿ. ಮನೋಹರ ಕುಮಾರ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠವು ಈ ಬಗ್ಗೆ ವಿಚಾರಣೆ ನಡೆಸುತ್ತಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲೆ ಬಿ.ವಿ. ವಿದ್ಯುಲ್ಲತಾ ಅವರು ವಾದ ಮಂಡಿಸಿದ್ದು, ಯೋಜನೆಯಿಂದ ಆಗುವ ಪರಿಸರ ಹಾನಿಯ ಬಗ್ಗೆ ನ್ಯಾಯಾಲಯದ ಗಮನ ಸೆಳೆದಿದ್ದಾರೆ.

Sharavathi Pumped Storage ಅಪಾರ ಅರಣ್ಯ ನಾಶದ ಆತಂಕ

ಈ ಬೃಹತ್ ಯೋಜನೆಗಾಗಿ ಒಟ್ಟು 142.763 ಹೆಕ್ಟೇರ್ ಭೂಮಿಯ ಅಗತ್ಯವಿದೆ. ಇದರಲ್ಲಿ 102 ಹೆಕ್ಟೇರ್ ಪ್ರದೇಶವು ನೇರವಾಗಿ ವನ್ಯಜೀವಿ ಅಭಯಾರಣ್ಯದೊಳಗೆ ಬರುತ್ತದೆ ಮತ್ತು 39.715 ಹೆಕ್ಟೇರ್ ಪ್ರದೇಶವು ಪರಿಸರ ಸೂಕ್ಷ್ಮ ವಲಯದಲ್ಲಿದೆ. ಬೃಹತ್ ಕಂಬಗಳ ಸ್ಥಾಪನೆ ಮತ್ತು ಹೈ-ವೋಲ್ಟೇಜ್ ತಂತಿಗಳನ್ನು ಎಳೆಯುವುದರಿಂದ ಅಮೂಲ್ಯವಾದ ವೃಕ್ಷ ಸಂಪತ್ತು ಹಾಗೂ ವನ್ಯಜೀವಿಗಳ ನೈಸರ್ಗಿಕ ಆವಾಸಸ್ಥಾನಕ್ಕೆ ಧಕ್ಕೆಯಾಗಲಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ವನ್ಯಜೀವಿ ರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಅಭಯಾರಣ್ಯ ಪ್ರದೇಶವನ್ನು ವನ್ಯಜೀವಿಗಳ ಉದ್ದೇಶ ಹೊರತುಪಡಿಸಿ ಬೇರೆ ಕಾರ್ಯಗಳಿಗೆ ಬಳಸಲು ಅನುಮೋದನೆ ನೀಡುವ ಅಧಿಕಾರ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗೆ ಇಲ್ಲ ಎಂಬುದು ಅರ್ಜಿದಾರರ ಪ್ರಬಲ ವಾದವಾಗಿದೆ. ಹೀಗಾಗಿ, ಈ ಯೋಜನೆಗೆ ನೀಡಲಾದ ತಾತ್ವಿಕ ಅನುಮೋದನೆಯನ್ನು ರದ್ದುಗೊಳಿಸಬೇಕು ಎಂದು ಕೋರಲಾಗಿದೆ.

Sharavathi Pumped Storage Project Legal Issue

Sharavathi Pumped Storage Project Legal Issue
Sharavathi Pumped Storage Project Legal Issue
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor