ಶರಾವತಿ ಮುಳುಗಡೆ ಸಂತ್ರಸ್ತರ ಭೂಮಿ ಡಿ-ನೋಟಿಫೈಗೆ ಪ್ರಸ್ತಾವನೆಗೆ ಮಧು ಬಂಗಾರಪ್ಪ ಸೂಚನೆ! ದೊಡ್ಡ ಬೆಳವಣಿಗೆ

ಹಂಚಿಕೊಳ್ಳಿ
WhatsApp Facebook X Telegram
ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫೈ ಪ್ರಸ್ತಾವನೆ ಕುರಿತು ಸಚಿವ ಮಧು ಬಂಗಾರಪ್ಪ ಸಭೆ ನಡೆಸುತ್ತಿರುವುದು

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶರಾವತಿ ಮುಳುಗಡೆ ಸಂತ್ರಸ್ತರ (Sharavathi Victims) ಅರಣ್ಯ ಭೂಮಿಯನ್ನ ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಸಲ್ಲಿಸಬೇಕಾದ ಪ್ರಸ್ತಾವನೆ ಕುರಿತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯ ಹೈಲೈಟ್ಸ್​ನ ವಿವರ ಹೀಗಿದೆ.

  1. ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನ ಡಿ-ನೋಟಿಫೈ ಮಾಡುವ ಪ್ರಕ್ರಿಯೆ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆಯಲ್ಲಿ ಇರಬೇಕಾದ ಅಗತ್ಯ ದಾಖಲೆಗಳು ಹಾಗೂ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.
  2. ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿ ವಿಳಂಬವಾಗದಂತೆ ಅಗತ್ಯ ದಾಖಲೆ ಮತ್ತು ಮಾಹಿತಿಯನ್ನ ಪೂರ್ಣ ಪ್ರಮಾಣದಲ್ಲಿ ಸಿದ್ಧಪಡಿಸಬೇಕು.
  3. ನಿಯಮಾನುಸಾರ ಪ್ರಸ್ತಾವನೆಯನ್ನು ರೂಪಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಸಾರ್ವಜನಿಕರಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಅವುಗಳ ಪರಿಹಾರಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಪಂ ಸಿಇಒ ಎನ್. ಹೇಮಂತ್, ಸಿಸಿಎಫ್ ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor