ಧಗಧಗ ಧಗೆ | ತಾಪಮಾನದಲ್ಲಿ ತೀವ್ರ ಹೆಚ್ಚಳ | ಹವಾಮಾನ ಇಲಾಖೆ ವಾರ್ನಿಂಗ್‌ | ಅಲರ್ಟ್‌ ಆಗಿರಿಲು ಇಲ್ಲಿದೆ ಸಲಹೆ

Sharp rise in temperature | Indian Meteorological department warning Here's a tip to stay alert Indian Meteorological Department

ಧಗಧಗ ಧಗೆ | ತಾಪಮಾನದಲ್ಲಿ ತೀವ್ರ ಹೆಚ್ಚಳ | ಹವಾಮಾನ ಇಲಾಖೆ ವಾರ್ನಿಂಗ್‌ | ಅಲರ್ಟ್‌ ಆಗಿರಿಲು ಇಲ್ಲಿದೆ ಸಲಹೆ
Indian Meteorological Department,Sharp rise in temperature

SHIVAMOGGA | MALENADUTODAY NEWS | Apr 23, 2024   

ಭಾರತ ಹವಾಮಾನ ಇಲಾಖೆ (IMD) ಯು ಈ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ (Heat Wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನ ಕಂಡು ಬರುತ್ತಿದೆ.  ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. 

ಭಾರತೀಯ ಹವಾಮಾನ ಇಲಾಖೆಯು ಏಪ್ರಿಲ್  2024ರ  ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ ಮಾಹೆಯಿಂದ ಮೇ- 2024 ರ ಅವಧಿಯಲ್ಲಿ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ತಿಳಿಸಿದೆ. 

ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿರುವುದರಿಂದ, ಅತೀ ಹೆಚ್ಚು ತಾಪಮಾನ ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದೆ.

ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು:

  1. ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12.00 ರಿಂದ 3.00 ರವರೆಗೆ). 

  2. ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು. 

  3. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸುವುದು. 

  4. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು). 

  5. ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು. 

  6. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು. 

  7. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿಮಾಡುವುದು. 

  8. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಓಆರ್‍ಎಸ್ ಅನ್ನು ಬಳಸುವುದು. ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು. 

  9. ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‍ ಗಳು ಅಥವಾ ಸನ್‍ಶೇಡ್‍ಗಳನ್ನು ಬಳಸುವುದು.

  10. ಹಾಗೂ ಆಗ್ಗಿಂದಾಗೆ ತಣ್ಣೀರು ಸ್ನಾನ ಮಾಡುವುದು. 

  11. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್ / ಹೆಡ್‍ಕವರ್, ಹ್ಯಾಂಡ್‍ಟವೆಲ್, ಹ್ಯಾಂಡ್ ಪ್ಯಾನ್, ಎಲೆಕ್ಟೋಲೈಟ್ / ಗ್ಲೂೀಕೋಸ್ / ಓಆರ್‍ಎಸ್‍ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್‍ಅನ್ನು ಒಯ್ಯುವುದು.

ಅತೀ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಗುರುತಿಸುವಿಕೆ:

ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಮತ್ತು / ಅಥವಾ ಶಾಖದ ಅಘಾತದಂತಹ ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅವುಗಳ ರೋಗ ಲಕ್ಷಣಗಳು ಈ ಕೆಳಕಂಡಂತಿವೆ:

ಶಾಖ ಸೆಳೆತಗಳು (Heat cramps) : ಎಡೆರ್ನಾ (ಊತ) ಮತ್ತು ಮೂರ್ಛೆ ಸಾಮಾನ್ಯವಾಗಿ 39 ಡಿ.ಸೆ. ಅಂದರೆ 102 °F ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ.

ಶಾಖದ ಬಳಲಿಕೆ : ಆಯಾಸ, ದೌರ್ಭಲ್ಯ, ತಲೆ ತಿರುಗುವಿಕೆ, ತಲೆ ನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು.

ಶಾಖಾಘಾತ (Sun Stroke) : ದೇಹದ ಉಷ್ಣತೆಯು 40 ಡಿ.ಸೆ. ಅಂದರೆ 104 °F ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.

ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ: 

ಅತೀ ಹೆಚ್ಚು ತಾಪಮಾನದಿಂದ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ, ಸ್ಥಳಾಂತರಿಸುವುದು. 

ಒದ್ದೆಯಾದ ಬಟ್ಟೆಯಿಂದ ಮೈ ಒರೆಸುವುದು / ತಂಪಾದ ಒದ್ದೆ ಬಟ್ಟೆಯನ್ನು ಹಾಕುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು. 

ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್‍ಎಸ್. ನಿಂಬೆ ಪಾನಕ ನೀಡುವುದು (ವ್ಯಕ್ತಿ ಇನ್ನೂ ಪ್ರಜ್ಞೆ ಹೊಂದಿದ್ದರೆ). 

ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು. 

ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಕೂಡಲೇ ಸಂಪರ್ಕಿಸುವುದು.  

ಮದ್ಯ ಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.ಅತೀ ಹೆಚ್ಚು ತಾಪಮಾನದ ಈ  ಸಂದರ್ಭದಲ್ಲಿ ಸಾರ್ವಜನಿಕರು ಅತಿ ಎಚ್ಚರದಿಂದಿರುವಂತೆ ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಸ್.ಆರ್. ಶಿವಶಂಕರ್‍ ರವರು ಸೂಚಿಸಿದ್ದಾರೆ.