SHIVAMOGGA NEWS TODAY

ಪೋಟೋದಲ್ಲಿರುವ ಮಹಿಳೆ ಜನವರಿಯಿಂದ ಕಾಣೆ, ಎಲ್ಲಾದರೂ ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಣಸೋಗಿ ಗ್ರಾಮದ ದೀಪಾ (30) ಎಂಬ ಮಹಿಳೆ ಜನವರಿ 2026 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಸ್ಸಾಗಿರುವುದಿಲ್ಲ ಎಂದು ತಿಳಿದುಬಂದಿದೆ.

ಶಿವಮೊಗ್ಗ: ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಈಕೆಯು ಕಣಸೋಗಿ ಗ್ರಾಮದ ಬಲವೀಂದ್ರಪ್ಪ ಎಂಬುವವರ ಪತ್ನಿಯಾಗಿದ್ದು, ಜನವರಿಯಲ್ಲಿ ಮನೆಯಿಂದ ಹೋದವರು ಮರಳಿ ಬಂದಿಲ್ಲ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದ ಮಹಿಳೆಯು ಸುಮಾರು 5 ಅಡಿ ಎತ್ತರ, ತೆಳುವಾದ ಮೈಕಟ್ಟು ಹಾಗೂ ಗೋಧಿ ಮೈಬಣ್ಣ ಹೊಂದಿದ್ದಾರೆ. ಕೋಲು ಮುಖದ ಈಕೆ ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೊರಡುವಾಗ ಹಸಿರು ಬಣ್ಣದ ಸೀರೆಯನ್ನು ಧರಿಸಿದ್ದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ಈ ಮಹಿಳೆಯ ಕುರಿತು ಯಾವುದೇ ಸುಳಿವು ಅಥವಾ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ತಕ್ಷಣ ಶಿರಾಳಕೊಪ್ಪ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆಗಳು: 8722983310 ಅಥವಾ 9480803367 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shikaripura 30-Year-Old Woman Deepa Missing

Shikaripura 30-Year-Old Woman Deepa Missing
Shikaripura 30-Year-Old Woman Deepa Missing

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.