shikaripura car accident : ಶಿವಮೊಗ್ಗ: ಚಲಿಸುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್, ಓರ್ವನಿಗೆ ಗಂಭೀರ ಗಾಯ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಚಲಿಸುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್ ಆಗಿ ರಸ್ತೆ ಬದಿಯಲ್ಲಿದ್ದ ಐದು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಘಟನೆ ತರಲಘಟ್ಟ ಗ್ರಾಮದ ಚಿಕನ್ ಅಂಗಡಿಯೊಂದರ ಎದುರು ನಡೆದಿದೆ. ಟಯರ್ ಬ್ಲಾಸ್ಟ್ ಆದ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರು, ಅಲ್ಲೇ ನಿಲ್ಲಿಸಿದ್ದ ಬೈಕ್‌ಗಳಿಗೆ ಅಪ್ಪಳಿಸಿದೆ. ಈ ಡಿಕ್ಕಿಯ ರಭಸಕ್ಕೆ ಕಾರು ಮತ್ತು ಬೈಕ್‌ಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.
ಘಟನೆಯ ಸಮಯದಲ್ಲಿ ಬೈಕ್ ಮೇಲೆ ಕುಳಿತಿದ್ದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದ ತಕ್ಷಣ ಶಿಕಾರಿಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

