KARNATAKA NEWS/ ONLINE / Malenadu today/ Oct 11, 2023 SHIVAMOGGA NEWS
ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಸರಕಾರಿ ಉದ್ಯೋಗ ಪಡೆದಿದ್ದ ವ್ಯಕ್ತಿಗೆ 2 ವರ್ಷ 3 ತಿಂಗಳು ಜೈಲು ಶಿಕ್ಷೆ 11 ಸಾವಿರ ರೂಪಾಯಿ ದಂಡ ಪಾವತಿಸುವಂತೆ ಶಿಕಾರಿಪುರದ ಜೆಎಂಎಫ್ ಸಿ ನ್ಯಾಯಾಲಯ ಆದೇಶಿಸಿದ.
ಶಿಕಾರಿಪುರ ಪಟ್ಟಣ ಠಾಣೆ ವ್ಯಾಪ್ತಿ ಭದ್ರಾಪುರ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಆ ಅನುಕಂಪ ಆಧಾರದಲ್ಲಿ 1997ರಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದ ವ್ಯಕ್ತಿಯೊಬ್ಬರಿಗೆ ಅವರ ತಂದೆ ಮೃತರಾದ ಕಾರಣಕ್ಕೆ ಅನುಕಂಪ ಆಧಾರದಲ್ಲಿ ಉದ್ಯೋಗ ನೀಡಲಾಗಿತ್ತು. ತಂದೆ ಸೇವಾ ಪುಸ್ತಕದಲ್ಲಿ ಗಂಗಾಮತ ಎಂದು ನಮೂದಾಗಿತ್ತು. ಆರೋಪಿಯ ಶಾಲಾ ದಾಖಲೆಯಲ್ಲಿ ಮಾತ್ರ ‘ಹಿಂದೂ ಧೋವಿ ಎಂದು ನಮೂದಾಗಿತ್ತು .
ಅದನ್ನೇ ಉದ್ಯೋಗ ಪಡೆಯುವುದಕ್ಕೆ ದಾಖಲೆಯಾಗಿ ಬಳಸಿಕೊಂಡು ಸರಕಾರಿ ಉದ್ಯೋಗ ಪಡೆದಿದ್ದಲ್ಲದೆ ಅವರ ಸೇವಾ ಮಸ್ತಕದಲ್ಲೂ ಹಿಂದೂ ಭೋವಿ ಎಂದು ನಮೂದಿಸಿದಲ್ಲದೆ ಮುಂಬಡ್ತಿಗೂ ಪ್ರಯತ್ನಿಸಿದ್ದರು. ತನ್ನದು ಗಂಗಾಮತ ಜಾತಿ ಎಂದು ಗೊತ್ತಿದ್ದರೂ ನೇಮಕಾತಿ ಪ್ರಾಧಿಕಾರಕ್ಕೆ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ವಂಚಿಸಲಾಗಿದೆ ಎಂದು ಕಂದಾಯ ಇಲಾಖೆ 2010ರಲ್ಲಿ ಪಟ್ಟಣ ಠಾಣೆಗೆ ದೂರು ನೀಡಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಕ್ಕೆ ಮೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಾದ ವಿವಾದ ಆಲಿಸಿದ ನ್ಯಾಯಾಲಯ ಐಪಿಸಿ ಕಲಂ 177ರನ್ವಯ ಸುಳ್ಳು ಮಾಹಿತಿ ನೀಡಿದ ಕಾರಣಕ್ಕೆ 3ತಿಂಗಳ ಸಾದಾ ಸಜೆ, 1000 ರೂ ದಂಡ ಮತ್ತು ಭಾದಂಸಂ, ಕಲ 420, 511ರನ್ವಯ ವಂಚನೆ, ಅಪರಾಧ ಎಸಗಿದ ಕಾರಣಕ್ಕೆ 2 ವರ್ಷ ಸಾದಾ ಸಜೆ, 10ಸಾವಿರ ರೂ. ದಂಡ ವಿಧಿಸಿ ನೀಡಿದ್ದಾರೆ. ಸಹಾಯಕ ಸರಕಾರಿ ಅಭಿಯೋಜಕರು ಸರಕಾರದ ಪರವಾಗಿ ವಾದ ಮಂಡಿಸಿದ್ದರು.
ಇನ್ನಷ್ಟು ಸುದ್ದಿಗಳು
R M MANJUNATH GOWDA ರವರ ಮನೆಗಳ ಮೇಲೆ ED ದಾಳಿಗೆ ಕಾರಣವೇನು? ಏನಿದು ಪ್ರಕರಣ?
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಮಹತ್ವದ ಪ್ರಕಟಣೆ! ಶಿವಮೊಗ್ಗದಲ್ಲಿಯೇ ನೋಂದಣಿ ಮಾಡಿಕೊಳ್ಳಿ
ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ