SHIKARIPURA

ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿಕಾರಿಪುರದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಕಲಿ ಪಿಎಚ್.ಡಿ ಪ್ರಮಾಣಪತ್ರ ನೀಡಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕ ಮಾದೇಶ ಪ್ರಭು ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ. 2015ರಲ್ಲಿ ಉತ್ತರ ಪ್ರದೇಶದ ಝಾನ್ಸಿಯಲ್ಲಿರುವ ಬುಂದೇಲ್‌ಖಂಡ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪೂರ್ಣಗೊಳಿಸಿರುವುದಾಗಿ ಇವರು ಪ್ರಮಾಣಪತ್ರವನ್ನು ಸಲ್ಲಿಸಿದ್ದರು. ಇತ್ತೀಚೆಗೆ ಪದವಿ ಪ್ರಮಾಣಪತ್ರಗಳ ನೈಜತೆಯನ್ನು ಪರಿಶೀಲಿಸುವಂತೆ ಸರ್ಕಾರವು ಸುತ್ತೋಲೆ ಹೊರಡಿಸಿತ್ತು.

ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್!

ಸರ್ಕಾರದ ಸೂಚನೆಯ ಮೇರೆಗೆ ಕಾಲೇಜು ಮಟ್ಟದ ಪರಿಶೀಲನಾ ಸಮಿತಿಯು ಬುಂದೇಲ್‌ಖಂಡ ವಿಶ್ವವಿದ್ಯಾಲಯದೊಂದಿಗೆ ಅಧಿಕೃತವಾಗಿ ಸಂವಹನ ನಡೆಸಿ ಮಾಹಿತಿಯನ್ನು ಕಲೆಹಾಕಿತ್ತು. ಈ ವೇಳೆ ಮಾದೇಶ ಪ್ರಭು ಅವರು ಸದರಿ ವಿಶ್ವವಿದ್ಯಾಲಯದಿಂದ ಯಾವುದೇ ಪಿಎಚ್.ಡಿ ಪದವಿಯನ್ನು ಪಡೆದಿಲ್ಲ ಎಂಬ ಅಂಶ ದೃಢಪಟ್ಟಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ಈ ಹಿನ್ನೆಲೆಯಲ್ಲಿ ಕಾಲೇಜಿನ ಪರಿಶೀಲನಾ ಸಮಿತಿಯು ಸಭೆ ಸೇರಿ ಚರ್ಚಿಸಿ, ನಕಲಿ ದಾಖಲೆ ಒದಗಿಸಿದ ಕಾರಣಕ್ಕಾಗಿ ಅವರನ್ನು ಶುಕ್ರವಾರ ಸೇವೆಯಿಂದ ವಜಾಗೊಳಿಸಿದೆ.

ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕರಾಗಿದ್ದ ಮಾದೇಶ ಪ್ರಭು ಅವರು ಸಲ್ಲಿಸಿದ್ದ ಪಿಎಚ್.ಡಿ ಪದವಿ ಪ್ರಮಾಣಪತ್ರವು ನಕಲಿಯಾಗಿರುವ ಕಾರಣಕ್ಕೆ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ

ಚನ್ನೇಶ್ ,ಶಿಕಾರಿಪುರದ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು

ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed
ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ