ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅರ್ನಹಗೊಳಿಸಿರುವುದನ್ನ ಖಂಡಿಸಿ ಎನ್ಎಸ್ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣ ಬಳಿ ಪ್ರತಿಭಟನೆ 40 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿಕಾರಿಪುರದಲ್ಲಿ ನಿನ್ನೆ ನಡೆದ ಬಂಜಾರ ಸಮುದಾಯದ ಪ್ರತಿಭಟನೆ ವಿಕೋಪಕ್ಕೆ ಹೋಗಿತ್ತು, ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ಪ್ರತಿಯೊಂದು ಪ್ರತಿಭಟನೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದಕ್ಕೆ ಪೂರಕವಾಗಿ ಶಿವಮೊಗ್ಗ ರೈಲು ನಿಲ್ದಾಣದ ಬಳಿಯಲ್ಲಿ ಎನ್ಎಸ್ಯುಐ ಸಂಘಟನೆ ಧರಣಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ರೈಲ್ವೆ ಸ್ಟೇಷನ್ ಬಳಿಯಲ್ಲಿ ನಿಯೋಜಿಸಲಾಗಿತ್ತು.
ಶಿಕಾರಿಪುರದಲ್ಲಿ ಬಿಎಸ್ವೈ ಮನೆಗೆ ಕಲ್ಲು ತೂರಿದ ಘಟನೆಯಲ್ಲಿ ರೌಡಿಗಳ ಕುಮ್ಮಕ್ಕು/ ಗೃಹಸಚಿವ ಆರಗ ಜ್ಞಾನೇಂದ್ರ
ಇನ್ನೂ ಬೆಳಗ್ಗೆ 11 ಗಂಟೆ ಸುಮಾರಿಗೆ , ರೈಲ್ವೆ ನಿಲ್ದಾಣದ ಬಳಿಯಲ್ಲಿ ಎನ್ಎಸ್ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಮೇಲ್ಮನವಿ ಸಲ್ಲಿಸಲು ಅವಕಾಶಗಳಿದ್ದರೂ ಸಹ, ಕೋರ್ಟ್ ತೀರ್ಪಿನ ಆದೇಶದ ಪ್ರತಿ ಕೈಗೆ ಸಿಗುವ ಮೊದಲೇ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುರುವುದನ್ನು ಖಂಡಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದರು.
ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಾ ದ್ವೇಷದ ರಾಜಕಾರಣ ಮಾಡುತ್ತಿದೆ. ಆ ಮೂಲಕ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆತಂಕ ತಂದೊಡ್ಡುತ್ತಿದೆ. ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮುಂದಿನ ಪ್ರಧಾನಿ ಅಭ್ಯರ್ಥಿ. ಅವರನ್ನು ರಾಜಕೀಯವಾಗಿ ಮುಗಿಸುವ ಸಂಚಿನಿAದಾಗಿ ಬಿಜೆಪಿ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದಾಗಲೂ ತರಾತುರಿಯಲ್ಲಿ ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದೆ. ಇದು ಖಂಡನೀಯ ಎಂದು ಆಕ್ರೋಶ ಹೊರಹಾಕಿದರು.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
ಶಿಕಾರಿಪುರ ಪ್ರತಿಭಟನೆಯ ಎಫೆಕ್ಟ್/ ರಾಹುಲ್ ಗಾಂಧಿ ಪರ ಧರಣಿ ನಡೆಸ್ತಿದ್ದ NSUI ಕಾರ್ಯಕರ್ತರು ಪೊಲೀಸ್ ವಶಕ್ಕೆ!#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News pic.twitter.com/g71pVAhK0W
— malenadutoday.com (@CMalenadutoday) March 28, 2023
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnewsShikaripura ruckus, internal reservation stir, Banjara community protests, stones at BSY’s house, protests in Shikaripura, police lathi shivamogga,shivamogga today news,nsui,shivamogga news,shivamogga visl,shivamogga latest news,shivamogga protest,nsui protest in shivamogga,shivamogga live,nsui shivamogga,shivamogga airport,shivamogga news chanel,nsui protest,shivamogga nsui fight,nsui fight in shivamogga,hijab issue in shivamogga,nsui unit protest today,nsui assistance to beggars & needy of shivamogga,shivamogga students protest,shimogga,nsui activists,shivamogga press
