ಜುಲೈ 20 ರಂದು ವರಲಕ್ಷ್ಮಿ ಪ್ರಕಾಶ್ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

ಹಂಚಿಕೊಳ್ಳಿ
WhatsApp Facebook X Telegram
Shikaripura Shanteshwari Society AGM
Shikaripura Shanteshwari Society AGM

Shikaripura ಶಿಕಾರಿಪುರ |  ಶಿಕಾರಿಪುರದ ಶ್ರೀ ಶಾಂತೇಶ್ವರಿ ಮಹಿಳಾ ಪತ್ತಿನ ಸಹಕಾರ ಸಂಘದ 23ನೇ ವರ್ಷದ ವಾರ್ಷಿಕ ಮಹಾಸಭೆಯು ಜುಲೈ 20ರಂದು ಜರುಗಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ಶಾಂತಿನಗರದ ಸಂಘದ ಆವರಣದಲ್ಲಿ ಸರ್ವ ಸದಸ್ಯರ ಈ ಮಹಾಸಭೆ ಆಯೋಜನೆಗೊಂಡಿದ್ದು, ಧಾರ್ಮಿಕ ದತ್ತಿ ಇಲಾಖೆಯ ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯೆಯಾಗಿರುವ ಬಿ. ವರಲಕ್ಷ್ಮಿ ಪ್ರಕಾಶ್ ಅವರು ಉಪನ್ಯಾಸ ನೀಡಲಿದ್ದಾರೆ.

ಜೋಗ ಜಲಪಾತ, ಟ್ರೆಕ್ಕಿಂಗ್ ಹೋಗೋ ಪ್ಲಾನ್ ಇದೆಯಾ? ಶಿವಮೊಗ್ಗ ಜಿಲ್ಲಾಧಿಕಾರಿಗಳ ಈ ಆದೇಶವನ್ನೊಮ್ಮೆ ಓದಿ

ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಹಾಲಿ ಅಧ್ಯಕ್ಷೆಯಾದ ಪದ್ಮಾ ಪರಶುರಾಮ್ ಅವರು ವಹಿಸಿಕೊಳ್ಳಲಿದ್ದಾರೆ. ಇದೇ ವೇಳೆ ಮುಖ್ಯ ಅತಿಥಿಗಳಾಗಿ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ಉಪಾಧ್ಯಕ್ಷೆಯಾದ ಶಾಂತಲಾ ಭೂಕಾಂತ್ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಡಿ.ಎಲ್. ಬಸವರಾಜ್ ಅವರು ಉಪಸ್ಥಿತರಿರಲಿದ್ದಾರೆ.

ಇವರೊಂದಿಗೆ ಬಸವೇಶ್ವರ ಸಹಕಾರಿ ಒಕ್ಕೂಟ ಸಂಘದ ನಿರ್ದೇಶಕರಾದ ಟಿ. ಪರಮೇಶ್ವರಪ್ಪ ಮತ್ತು ಪ್ರಮುಖ ಗಣ್ಯರಾದ ಮಂಗಳ ವಿಶ್ವೇಶ್ವರಯ್ಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಭೆಯನ್ನು ಅಲಂಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor