Shimoga | ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳೂರು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಧನಂಜಯ (51) ನಿನ್ನೆ ಮಂಗಳವಾರ ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಬೆಳಿಗ್ಗೆ ಶಾಲೆಗೆ ಆಗಮಿಸಿದ್ದ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು. ವಿರಾಮದ ಅವಧಿಯಲ್ಲಿ ಕೊಠಡಿಯಿಂದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ್ದರು. ದಾಖಲೆ ಬರೆಯುವ ಕೆಲಸವಿದೆ ಎಂದು ಹೇಳಿ ಬಾಗಿಲು, ಕಿಟಕಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ
ವಿದ್ಯಾರ್ಥಿಗಳು ಶಾಲೆಯ ಕಟ್ಟೆಯ ಮೇಲೆ ಕುಳಿತಿರುವುದನ್ನು ಗಮನಿಸಿದ ಇತರೆ ಶಿಕ್ಷಕರು, ಕೊಠಡಿ ಬಳಿ ಬಂದು ಕಿಟಕಿ ತೆಗೆದಾಗ, ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಬೆಳಿಗ್ಗೆಯೇ ಗ್ರಾಮಕ್ಕೆ ಬಂದಿದ್ದ ಅವರು. ಮತದಾರರ ಪರಿಷ್ಕರಣೆ ಕಾರ್ಯ ನಡೆಸಿ ನಂತರ ಶಾಲೆಗೆ ಆಗಮಿಸಿದ್ದರು.ಧನಂಜಯ ಅವರು ಹೊನ್ನಾಳಿಯಲ್ಲಿ ವಾಸವಿದ್ದರು.
ಬಿಎಲ್‌ಒ ಕೆಲಸದ ಒತ್ತಡದಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಧನಂಜಯ ಅವರ ಪತ್ನಿ ಅಶಾ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
