Shikaripura ಶಿವಮೊಗ್ಗ: ಪ್ರೀತಿ ನಿರಾಕರಣೆ ಹಾಗೂ ಯುವತಿಯ ಕುಟುಂಬದವರಿಂದ ಹಲ್ಲೆಗೊಳಗಾಗಿ ಮನನೊಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ಯುವಕನನ್ನುಶಿಕಾರಿಪುರ ತಾಲೂಕಿನ ಶಬರೀಶ್ (28) ಎಂದು ಗುರುತಿಸಲಾಗಿದೆ.
ಶಿವಮೊಗ್ಗ: JNNCE ಹಾಸ್ಟೆಲ್ ರೂಮ್‌ಗೆ ನುಗ್ಗಿದ ಕಳ್ಳರು, ಕದ್ದಿದ್ದೇನು ಗೊತ್ತಾ?
ಘಟನೆಯ ವಿವರ:
ಮೂಲತಃ ಶಿಕಾರಿಪುರದವರಾದ ಶಬರೀಶ್ ಅವರು ತೀರ್ಥಹಳ್ಳಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದರು. ಅವರು ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇಬ್ಬರ ಪ್ರೇಮಕ್ಕೆ ಮನೆಯವರ ವಿರೋಧವಿತ್ತು ಎನ್ನಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಯುವತಿಯು ಶಬರೀಶ್‌ಗೆ ಕರೆ ಮಾಡಿ, ನಾನು ನಿನ್ನ ಬಳಿ ಮಾತನಾಡಬೇಕು, ಶಿವಮೊಗ್ಗದ ಸರ್ಕಾರಿ ಬಸ್ ನಿಲ್ದಾಣಕ್ಕೆ ಬಾ ಎಂದು ಹೇಳಿದ್ದಳು. ಈ ಹಿನ್ನೆಲೆಯಲ್ಲಿ ಶಬರೀಶ್ ಅಲ್ಲಿಗೆ ಆಗಮಿಸಿದ್ದರು.
ಆ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಶಬರೀಶ್ ಮತ್ತು ಯುವತಿಯ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಯುವತಿಯು ತನ್ನ ಸಂಬಂಧಿಕರೊಂದಿಗೆ ಸೇರಿ ಶಬರೀಶ್ ಮೇಲೆ ಹಲ್ಲೆ ನಡೆಸಿದ್ದಾಳೆ ಎನ್ನಲಾಗಿದೆ. ನಾನು ನಿನ್ನನ್ನು ಮದುವೆಯಾಗುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಲ್ಲದೆ, ಶಬರೀಶ್ ಮೊಬೈಲ್‌ನಲ್ಲಿದ್ದ ಫೋಟೋಗಳನ್ನು ಬಲವಂತವಾಗಿ ಡಿಲೀಟ್ ಮಾಡಿಸಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ನಡೆದ ಅವಮಾನ ಹಾಗೂ ಹಲ್ಲೆಯಿಂದ ತೀವ್ರ ಮನನೊಂದ ಶಬರೀಶ್, ಬಸ್ ನಿಲ್ದಾಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ತಕ್ಷಣ ಅಲ್ಲಿದ್ದವರು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 22ರ ಮಧ್ಯಾಹ್ನ ಶಬರೀಶ್ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Shikaripura Youth Sabarish Commits Suicide


