SHIVAMOGGA | MALENADUTODAY NEWS | Sep 5, 2024
ಶಿವಮೊಗ್ಗಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಬರಲಿದೆ ಎಂದು ವಿಶ್ವಾಸ ಮೂಡಿಸಿರುವ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆಯು ಪ್ರತಿಕ್ರಿಯಿಸಿದ್ದಾರೆ.
ಶಿವಮೊಗ್ಗ ಏರ್‌ಪೋರ್ಟ್
ವಿಮಾನ ನಿಲ್ದಾಣದ ಲೈಸೆನ್ಸ್ ಈ ತಿಂಗಳ ಸೆಪ್ಟೆಂಬರ್ 23 ಕ್ಕೆ ಕೊನೆಗೊಳ್ಳಲಿದೆ. ಅದರ ರಿನಿವಲ್‌ಗೆ ಪ್ರಯತ್ನ ನಡೆಯಬೇಕಿದೆ. ಇಲ್ಲವಾದಲ್ಲಿ ಸದ್ಯ ಹಾರಾಡುತ್ತಿರುವ ಪ್ಲೈಟ್‌ಗಳ ಸಂಚಾರಕ್ಕೆ ಅಡ್ಡಿಯಾಗಲಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಬಿವೈ ರಾಘವೇಂದ್ರ ಈ ಬಗ್ಗೆ ರಾಜ್ಯಸರ್ಕಾರ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣದ ಪರವಾನಿಗೆ ನವೀಕರಣಗೊಳಿಸುವ ಬಗ್ಗೆ ಸರ್ಕಾರದ ಮೇಲೆ ವಿಶ್ವಾಸವಿದೆ. ನಿಲ್ದಾಣಕ್ಕೆ ಕೆಲವು ಮೂಲಭೂತ ಸೌಕರ್ಯಗಳ ಕೊರತೆ ಇದೆ. ಅದನ್ನ ಸರಿಪಡಿಸಬೇಕು.
ವಿಮಾನ ನಿಲ್ದಾಣಕ್ಕೆ ಕೆಲವು ಉಪಕರಣಗಳ ಅವಶ್ಯಕತೆ ಇದೆ. ಅಲ್ಲದೆ ಫೈರ್ ಜೆಟ್ ಗೆ ಮೆಕಾನಿಕ್ ನೇಮಿಸಬೇಕು. ಅದೇ ರೀತಿ, ಸಿಬ್ಬಂದಿಗಳಿಗೆ ಸಮವಸ್ತ್ರ ಒದಗಿಸಬೇಕು ಎಂದಿದ್ದಾರೆ.
ನೈಟ್ ಲ್ಯಾಂಡಿಂಗ್
ಇದೇ ಶಿವಮೊಗ್ಗದಲ್ಲಿ ನೈಟ್ ಲ್ಯಾಂಡಿಂಗ್‌ಗೆ ಅವಕಾಶ ಸಿಕ್ಕಿದೆ ಎಂದಿರುವ ಅವರು ಶಿವಮೊಗ್ಗ ವಿಮಾನ ನಿಲ್ದಾಣ ಅಂತರಾಷ್ಟಿಯ ವಿಮಾನ ನಿಲ್ದಾಣವಾಗುವ ಎಲ್ಲಾ ರೀತಿಯ ಸವಲತ್ತುಗಳನ್ನು ಹೊಂದಿದೆ ಎಂದರು.
ಈ ನಡುವೆ KSIIDC ಅಧಿಕಾರಿಗಳು ಡಿಜಿಸಿಎ ನ ಅಧಿಕಾರಿಗಳನ್ನ ಇದೇ ಸೆಪ್ಟೆಂಬರ್ 10 ಕ್ಕೆ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಅವರು ಡಿಜಿಸಿಎನ ಅಧಿಕಾರಿಗಳಿಗೆ ಲೈಸೆನ್ಸ್ ರಿನಿವಲ್ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ತಿಂಗಳು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದ್ದ ಡಿಜಿಸಿಎ ಅಧಿಕಾರಿಗಳು ವಿವಿಧ ಕೊರತೆಗಳನ್ನು ನೀಗಿಸುವಂತೆ ತಿಳಿಸಿ ಒಂದು ತಿಂಗಳ ಮಟ್ಟಿಗೆ ಮಾತ್ರ ಲೈಸೆನ್ಸ್ ರಿನಿವಲ್ ಮಾಡಿದ್ದರು. ಈ ಕಾರಣಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ () ಮತ್ತೆ ಸುದ್ದಿಯಲ್ಲಿದೆ.
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?
ಇದನ್ನು ಸಹ ಓದಿ :ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ