KARNATAKA NEWS/ ONLINE / Malenadu today/ Sep 12, 2023 SHIVAMOGGA NEWS
ಸಿದ್ದರಾಮಯ್ಯರಿಗೆ ಗೂಟದ ಕಾರು
ಸಿಎಂ ಸಿದ್ದರಾಮಯ್ಯರಿಗೆ ಗೂಟದ ಕಾರನ್ನು ನೀಡಿದ್ದು ಬಿಜೆಪಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಿನ್ನೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯನ್ನು ಸಮರ್ಥಿಸಿಕೊಂಡರು. ಅಲ್ಲದೆ ಈ ಮೈತ್ರಿಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದರು..
ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಒಂದೇ ಒಂದು ಸ್ಥಾನವನ್ನು ಕಾಂಗ್ರೆಸ್ ಪಡೆಯುವುದಿಲ್ಲ. ಈ ಮೈತ್ರಿಕೂಟದಿಂದ ಕಾಂಗ್ರೆಸ್ ನಾಯಕರಿಗೆ ಹೊಟ್ಟೆನೋವು ಶುರುವಾಗಿದೆ. ಬಿಜೆಪಿ ಕೋಮುವಾದಿ ಪಕ್ಷ ಎಂದು ಟೀಕಿಸುತ್ತಿದ್ದಾರೆ. ಬಿಜೆಪಿ ಯಾವತ್ತೂ ಕೋಮುವಾದಿ ಅಲ್ಲ, ಕಾಂಗ್ರೆಸ್ಸೇತರ ಸರ್ಕಾರ ರಾಜ್ಯದಲ್ಲಿ ಬಂದಾಗ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದರು. ಆಗ ಇದೇ ಸಿದ್ದರಾಮಯ್ಯನವರಿಗೆ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದು, ಗೂಟದ ಕಾರನ್ನು ನೀಡಿದ್ದು ಬಿಜೆಪಿ, ಆ ವಿಚಾರವನ್ನು ಅವರು ನೆನಪಿಟ್ಟುಕೊಳ್ಳಬೇಕು ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಖಾಸಗಿ ಸಾರಿಗೆಗಳಿಗೆ ಪರಿಹಾರ ಇಲ್ಲ
‘ಶಕ್ತಿ’ ಯೋಜನೆಯನ್ನು ಖಾಸಗಿ ಬಸ್ ಗಳಿಗೂ ವಿಸ್ತರಿಸುವುದು ಅಥವಾ ಖಾಸಗಿ ಸಾರಿಗೆಗಳಿಗೆ ಆಗುತ್ತಿರುವ ನಷ್ಟ ತುಂಬಿಕೊಡುವುದು ಅಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿರುವ ಅವರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಬಂದ್ ನಡೆಸಿದೆ.ಈ ಬಗ್ಗೆ ಮಾತನಾಡಿದದ ಸಿದ್ದರಾಮಯ್ಯ ಖಾಸಗಿಯವರಿಗೆ ಆಗುವ ನಷ್ಟ ತುಂಬಿಕೊಡಲು ಆಗುವುದಿಲ್ಲ ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ.ಬಂದ್ ಮಾಡಲು ಎಲ್ಲರಿಗೂ ಹಕ್ಕಿದೆ. ಪ್ರತಿಭಟನೆ ಮಾಡಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ ಎಂದಿದ್ದಾರೆ.
ಕಟ್ಟಿನ ಕಾರು ಬೋರ್ಡ್ ಹರಿದಿದ್ದು ಯಾರು?
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಾರ್ಗಲ್ನ ವ್ಯಾಪ್ತಿ ಕಟ್ಟಿನಕಾರು ಬಸ್ ನಿಲ್ದಾಣದಲ್ಲಿ ಕಿಡಿಗೇಡಿಗಳು ಬಸ್ ನಿಲ್ದಾಣದ ಬೋರ್ಡ್ ಬ್ಯಾನರ್ನ್ನು ದುಷ್ಕರ್ಮಿಗಳು ಹರಿದಿದ್ದಾರೆ. ಹೊಸನಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತು ಸಿದ್ದರಾಮಯ್ಯ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಹರಿದು ಹಾಕಲಾಗಿದೆ. ಇದರು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು ಸ್ಥಳಕ್ಕೆ ಕಾರ್ಗಲ್ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಬಸ್ ನಿಲ್ದಾಣ ನಿರ್ಮಾಣ ಮಾಡುವ ವಿಚಾರದಲ್ಲಿ ಪರಸ್ಪರ ಚರ್ಚೆಗಳಾಗಿದ್ದು, ಅದರ ಮುಂದುವರಿದ ಭಾಗವಾಗಿ ರಾಜಕೀಯ ವೈಷಮ್ಯದಿಂದ ಕೃತ್ಯವೆಸಗಿರಬಹುದು ಎಂದು ಸ್ಥಳೀಯರು ಊಹಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
ಬಾರ್ನಲ್ಲಿ ಎಣ್ಣೆ ಕೊಡ್ಲಿಲ್ಲ ಎಂದು ಸಿಬ್ಬಂದಿಯನ್ನ ಅಟ್ಟಾಡಿಸಿ ಹಲ್ಲೆ! ಬಿಹೆಚ್ ರೋಡ್ನಲ್ಲಿ ನಿನ್ನೆ ನಡೆದಿದ್ದೇನು?
ಸಚಿವರ ಶಾಕ್/ 48 ಗಂಟೆಯಲ್ಲಿ ಬದಲಾಯ್ತು ಶಿವಮೊಗ್ಗ AIRPORT ನಲ್ಲಿದ್ದ ಈ ವ್ಯವಸ್ಥೆ!