ಶಿವಮೊಗ್ಗ ನಗರದಲ್ಲಿ ಬಿಜೆಪಿಯಿಂದ ಧಿಕ್ಕಾರ...ಧಿಕ್ಕಾರ | ಕಾಂಗ್ರೆಸ್​ ಸರ್ಕಾರದ ವಿರುದ್ದ ‘ATM’ ಅಸ್ತ್ರ|

Shimoga BJP has protested against the state governmentಶಿವಮೊಗ್ಗ ಬಿಜೆಪಿ ರಾಜ್ಯಸರ್ಕಾರದ ವಿರುದ್ದ ಪ್ರತಿಭಟನೆ ಕೈಗೊಂಡಿದೆ

ಶಿವಮೊಗ್ಗ ನಗರದಲ್ಲಿ ಬಿಜೆಪಿಯಿಂದ ಧಿಕ್ಕಾರ...ಧಿಕ್ಕಾರ |  ಕಾಂಗ್ರೆಸ್​ ಸರ್ಕಾರದ ವಿರುದ್ದ  ‘ATM’ ಅಸ್ತ್ರ|

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS



ರಾಜ್ಯದಲ್ಲಿ ನಡೆದ ಐಟಿ ರೇಡ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಿವಮೊಗ್ಗ ಬಿಜೆಪಿ ಇಂದು ಪ್ರತಿಭಟನೆ ನಡೆಸಿದೆ. ಶಿವಪ್ಪನಾಯಕ ವೃತ್ತದಲ್ಲಿ ಈ  ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಸುಳ್ಳ, ಶಿವಕುಮಾರ್​ ಕಳ್ಳ ಎಂದು ಘೋಷಣೆ ಕೂಗಿದರು. 



ಈ ವೇಳೆ ಮಾತನಾಡಿದ  ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ , ಐದು ಗ್ಯಾರಂಟಿಗಳನ್ನು ಘೋಷಿಸಿ ನುಡಿದಂತೆ ನಡೆದಿದ್ದೇವೆ ಎನ್ನುತ್ತಿದೆ ಕಾಂಗ್ರೆಸ್​ ಪಕ್ಷ. ಆದರೆ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳಲ್ಲೇ ಎಲ್ಲಾ ಗ್ಯಾರಂಟಿಗಳು ಸುಳ್ಳು ಎಂದು ಜನರಿಗೆ ಗೊತ್ತಾಗಿದೆ ಎಂದು ಆಕ್ರೋಶ ಹೊರಹಾಕಿದ್ರು.  

 

ಕರೆಂಟ್ ಇಲ್ಲ, ರೈತರಿಗೆ ನೀರಿಲ್ಲ. ಸುಳ್ಳುಗಳನ್ನು ಹೇಳುತ್ತಾ ಐದು ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್‌ಗೆ ಎಟಿಎಂ ಆಗಿದೆ ರಾಜ್ಯ ಸರ್ಕಾರ ಎಂದು ಆರೋಪಿಸಿದ ಈಶ್ವರಪ್ಪ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿ ಇಬ್ಬರೂ ಕೇಂದ್ರ ಕಾಂಗ್ರೆಸ್‌ ನಾಯಕರಿಗೆ ಮತ್ತು ಐದು ರಾಜ್ಯದ ಚುನಾವಣೆಗೆ ಹಣ ಹೊಂದಿಸಲು ಪೈಪೋಟಿಗಿಳಿದಿದ್ದಾರೆ ಎಂದು ದೂರಿದರು. 

 

ಅಲ್ಲದೆ  ಇದಕ್ಕಾಗಿ ಟ್ರಾನ್ಸ್‌ಫರ್ ದಂಧೆಯಲ್ಲಿ ಮುಳುಗಿದ್ದಾರೆ. ಕಾಂಗ್ರೆಸ್‌ ಕಾರ್ಪೊರೇಟರ್ ಮನೆಯಲ್ಲಿ 40 ಕೋಟಿ ಹಾಗೂ ಕಾಂಗ್ರೆಸ್ ಎಂಎಲ್‌ ಸಿ ಸಂಬಂಧಿಕರ ಮನೆಯಲ್ಲಿ 45 ಕೋಟಿ ಹಣ ಈಗಾಗಲೇ ಸಿಕ್ಕಿದೆ. ಇದು ಸ್ಯಾಂಪಲ್ ಅಷ್ಟೆ ಸಿಬಿಐ ತನಿಖೆಗೆ ಒಪ್ಪಿಸಲಿ. ನೂರಾರು ಕೋಟಿ ಹಗರಣ ಬೆಳಕಿಗೆ ಬರಲಿದೆ ಎಂದರು.  

 

ಮುಂಬರು ದಿನಗಳಲ್ಲಿ ಜೈಲು ಪಾಲಾದರೂ ತೊಂದರೆಯಿಲ್ಲ ಬಿಜೆಪಿಯಿಂದ ಆಟೊ ಚಾಲಕರು, ಬಸ್‌ ಚಾಲಕರು ಮತ್ತು ಎಲ್ಲಾ ವರ್ಗದ ಜನರೊಂದಿಗೆ ಸೇರಿ ರಸ್ತೆ ತಡೆ ನಡೆಸಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲಿದೆ. ಎಂದರು ತಿಳಿಸಿದ್ರು. 

 

ಮೈಸೂರು ದಸರಾದ ಕಲಾವಿದರಿಗೆ ನೀಡುವ ಸಂಭಾವನೆಯನ್ನು ಲಂಚ ತಿಂದ ಸರ್ಕಾರ ಇದು. ಲೂಟಿಗೆ ಮತ್ತೊಂದು ಹೆಸರೇ ಕಾಂಗ್ರೆಸ್‌ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಾ ಸುಳ್ಳು ಆರೋಪಗಳನ್ನು ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ತಾನೇ ಬಲೆಗೆ ಬಿದ್ದಿದೆ. ಕೇವಲ 5 ತಿಂಗಳಲ್ಲೇ ನೂರಾರು ಕೋಟಿ ಭ್ರಷ್ಟಾಚಾರ

ಮಾಡಿದ ಈ ಸರ್ಕಾರದ ವಿರುದ್ಧ ಸಿಬಿಐ ತನಿಖೆ ಆಗಬೇಕು ಎಂದು ಶಿವಮೊಗ್ಗ ಶಾಸಕ ಎಸ್​ಎನ್ ಚನ್ನಬಸಪ್ಪರ ಆರೋಪಿಸಿದ್ರು. 


 

ಇನ್ನಷ್ಟು ಸುದ್ದಿಗಳು 

ಶೇ...ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

 

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

 

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ