SHIVAMOGGA NEWS TODAY

BMW ಕಾರಿನಲ್ಲಿ ಗಾಂಜಾ ಸಾಗಟ, ಆರೋಪಿಯಿಂದ ಪೊಲೀಸರು ವಶಪಡಿಸಿಕೊಂಡ ಮಾಲ್​ ಎಷ್ಟು ಗೊತ್ತಾ? 

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shimoga ಶಿವಮೊಗ್ಗ: ಐಷಾರಾಮಿ ಬಿಎಂಡಬ್ಲ್ಯುಕಾರಿನಲ್ಲಿ ಮಾದಕ ವಸ್ತು ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಯೊಬ್ಬನನ್ನು ವಿನೋಬನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. 

ಶಿವಮೊಗ್ಗ: ಕಳೆದ 6 ತಿಂಗಳಲ್ಲಿ ಪೊಲೀಸ್​ ಇಲಾಖೆ ವಶಪಡಿಸಿಕೊಂಡ ಗಾಂಜಾ ಎಷ್ಟು ಕೆ ಜಿ ಗೊತ್ತಾ ? 

ಜುಲೈ 06 ರಂದು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪ ಮಾರ್ಗವಾಗಿ ಮಾದಕ ವಸ್ತುವನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ತಕ್ಷಣವೇ ಕಾರ್ಯಪ್ರವೃತ್ತರಾದ ವಿನೋಬನಗರ ಪಿಎಸ್‌ಐ ಹಾಗೂ ಸಿಬ್ಬಂದಿಗಳ ತಂಡವು ಸ್ಥಳದ ಮೇಲೆ ದಾಳಿ ನಡೆಸಿ, 46 ವರ್ಷದ ಮೌಲಾಸಾಬಾ ಕರ್ಜಗಿ ಎಂಬ ಆರೋಪಿಯನ್ನು  ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಆರೋಪಿಯಿಂದ ಅಂದಾಜು 1,10,000/- ರೂಪಾಯಿ ಮೌಲ್ಯದ ಒಟ್ಟು 02 ಕೆಜಿ 65 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಗಾಂಜಾ ಸಾಗಾಟಕ್ಕೆ ಬಳಸಲಾಗಿದ್ದ ಐಷಾರಾಮಿ ಬಿಎಂಡಬ್ಲ್ಯು ಕಾರು ಹಾಗೂ ಒಂದು ಮೊಬೈಲ್ ಫೋನ್‌ ಅನ್ನು ಸಹ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.