ಶಿವಮೊಗ್ಗ : ಜನವರಿ 6 ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬರನ್ನು ಭೇಟಿಯಾಗಲು ಬಂದಿದ್ದ ಇಬ್ಬರನ್ನ ಅಲ್ಲಿನ ಭದ್ರತಾ ಸಿಬ್ಬಂದಿಗಳು ಹಿಡಿದು ತುಂಗಾನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಕೈದಿಯೊಬ್ಬನನ್ನು ಭೇಟಿ ಮಾಡುವ ನೆಪದಲ್ಲಿ ಬಂದಿದ್ದ ಆರೋಪಿಗಳು ಅಕ್ರಮವಾಗಿ ಗಾಂಜಾವನ್ನು ಜೈಲಿನೊಳಗೆ ಸಾಗಿಸಲು ಮುಂದಾಗಿದ್ದರು. ತಪಾಸಣೆ ವೇಳೆ ಇದನ್ನು ಪತ್ತೆಹಚ್ಚಿದ ಕಾರಾಗೃಹ ಭದ್ರತಾ ಸಿಬ್ಬಂದಿ, ಆರೋಪಿಗಳನ್ನ ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ತುಂಗಾ ಠಾಣೆಯ ಪೊಲೀಸರು ಆರೋಪಿಗಳನ್ನ ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Shimoga Central Jail Two Youths Arrested : ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಗಾಂಜಾ ಸಾಗಾಟ ಯತ್ನ: ಇಬ್ಬರು ಯುವಕರ ಬಂಧನ
ಮದರಿ ಪಾಳ್ಯದ ನಿವಾಸಿಗಳಾದ ಮಹಮ್ಮದ್ ಅಕ್ಟರ್ (22) ಮತ್ತು ಅಜ್ಗರ್ (21) ಬಂಧಿತರು.ನಿನ್ನೆ ದಿನ ಸೋಮವಾರ ಸಂಜೆ ಈ ಇಬ್ಬರು ಆರೋಪಿಗಳು ಕೇಂದ್ರ ಕಾರಾಗೃಹದಲ್ಲಿರುವ ಕೈದಿಯನ್ನು ಭೇಟಿ ಮಾಡಲು ಅನುಮತಿ ಕೋರಿ ತೆರಳಿದ್ದರು. ಈ ವೇಳೆ ಅವರನ್ನು ಭದ್ರತಾ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದ್ದರು. ಆಗ ಆರೋಪಿಗಳ ಪ್ಯಾಂಟ್ನ ಒಳಭಾಗದಲ್ಲಿ ಗಾಂಜಾ ಇರುವುದು ಗೊತ್ತಾಗಿದೆ. ತಕ್ಷಣವೆ ಭದ್ರತಾ ಸಿಬ್ಬಂದಿ ತುಂಗಾನಗರ ಪೊಲೀಸ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಗಳಿಂದ ಗಾಂಜಾ ಸೀಜ್ ಮಾಡಿ ಆರೋಪಿಗಳನ್ನ ಬಂಧಿಸಿದ್ದಾರೆ.
ವಿಮೆ ನೀಡಲು ಸತಾಯಿಸಿದ ಕಂಪೆನಿಗೆ ಶಿವಮೊಗ್ಗ ಗ್ರಾಹಕ ನ್ಯಾಯಾಲಯದ ಚಾಟಿ: ಕೋರ್ಟ್ ನೀಡಿದ ತೀರ್ಪು ಏನು
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
