ಶಿವಮೊಗ್ಗ | ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?| ನೇಹಾ ಹಿರೇಮಠ ಕೇಸ್‌, ಮೋದಿ, BSY, ಹೆಚ್‌ಡಿಕೆ ಟೀಕೆಗೆ ಉತ್ತರ

Shimoga | What did CM Siddaramaiah say? Reply to Neha Hiremath case, Modi, BSY, HDK criticism

ಶಿವಮೊಗ್ಗ | ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?| ನೇಹಾ ಹಿರೇಮಠ ಕೇಸ್‌, ಮೋದಿ, BSY, ಹೆಚ್‌ಡಿಕೆ ಟೀಕೆಗೆ ಉತ್ತರ
Shimoga,CM Siddaramaiah,Modi, BSY, HDK

SHIVAMOGGA | MALENADUTODAY NEWS | Apr 22, 2024  

ಶಿವಮೊಗ್ಗಕ್ಕೆ ಇವತ್ತು ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ಬಂದಿಳಿದ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ನೇಹಾ ಹಿರೇಮಠ ಕೊಲೆ ಪ್ರಕರಣ ಸಿಒಡಿ ತನಿಖೆಗೆ ನೀಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಪ್ರಕರಣದ ತ್ವರಿತ ವಿಚಾರಣೆಯನ್ನು ವಿಶೇಷ ನ್ಯಾಯಾಲಯದ ಮೂಲಕ ನಡೆಸಿ ಕಾಲಮಿತಿಯಲ್ಲಿ  ವಿಚಾರಣೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.  

ನೇಹಾ ಹಿರೇಮಠ ಮನೆಗೆ ಬೇಟಿ ಏಕಿಲ್ಲ? 

ಈ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳುವುದಾಗಿ ತಿಳಿಸಿದ್ದಾರೆ.  

ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆ ಬಗ್ಗೆ ಏನಂತೀರಿ?

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದ ಸಿದ್ದರಾಮಯ್ಯ ದಿಂಗಾಲೇಶ್ವರ ಸ್ವಾಮಿಜಿಗಳು ತಮ್ಮ ಉಮೇದುವಾರಿಕೆ  ಹಿಂಪಡೆದು ಕಾಂಗ್ರೆಸ್ ಬೆಂಬಲಿಸಲು ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಜಾತ್ಯಾತೀತ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅವರ ಮಠ ಜಾತ್ಯಾತೀತವಾಗಿದ್ದು ಅವರ ಬೆಂಬಲ ಅಗತ್ಯವಿದೆ. ಹೀಗಾಗಿ ತಮ್ಮ ಸ್ಪರ್ಧೆಯನ್ನ ಹಿಂಪಡೆದು ಅವರು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾಗಿ ತಿಳಿಸಿದ್ರು. 

ನರೇಂದ್ರ ಮೋದಿಯವರ ಆರೋಪಕ್ಕೆ ನಿಮ್ಮ ಉತ್ತರ ?

ಪ್ರಧಾನಿಯಾಗಿ ನರೇಂದ್ರ ಮೋದಿಯವರು ಇಷ್ಟು ಕೆಳಮಟ್ಟದಲ್ಲಿ ಮಾತನಾಡ ಬಾರದಿತ್ತು. ಹಿಂದೂಗಳ ಮಾಂಗಲ್ಯವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ  ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವಂಥ ಮಾತುಗಳು. ದೇಶದ  ಪ್ರಧಾನಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂಥ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ ಎಂದರು. ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಅಸಮಾನತೆ ಹೋಗಬೇಕಾದರೆ ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಇರಬಾರದು, ಹಂಚಿಕೆಯಾಗಬೇಕೆಂದು ಹೇಳಿದ್ದಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಮಗೆ ನಂಬಿಕೆ ಇದೆ 

ಪ್ರಧಾನಿ ಮೋದಿ ನುಡಿದಂತೆ ನಡೆದಿಲ್ಲವೇ? 

ದೇಶದ ಪ್ರಧಾನಮಂತ್ರಿ ಇಂದಿನವರೆಗೆ ಹೇಳಿರುವುದನ್ನು ಅನುಷ್ಠಾನಕ್ಕೆ ತಂದಿಲ್ಲ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ,  15 ಮೇ ಹಣಕಾಸು ಆಯೋಗದ ಶಿಫಾರಸ್ಸು, ಬರಗಾಲಕ್ಕೆ ಪರಿಹಾರ ಕೊಟ್ಟಿಲ್ಲ, 15 ಲಕ್ಷ ಎಲ್ಲರ ಖಾತೆಗೆ ಬಂತೇ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಿದೆಯೇ? ರೈತರ ಆದಾಯ ದುಪ್ಪಟ್ಟು ಆಗಿದೆಯೇ? ಅಚ್ಚೇ ದಿನ್ ಬಂದಿದೆಯೇ? ಎಂದು ಸಿದ್ದರಾಮಯ್ಯರವರು ಪ್ರಶ್ನಿಸಿದ್ದಾರೆ. 

ಚೊಂಬಿನ ಜಾಹಿರಾತಿಗೆ ಡೇಂಜರ್‌ ಜಾಹಿರಾತು ಬಂದಿದ್ಯಲ್ಲ? 

ಕಾಂಗ್ರೆಸ್ ಜಾಹಿರಾತಿಗೆ ಪ್ರತಿಯಾಗಿ ಬಿಜೆಪಿಯವರು ಕಾಂಗ್ರೆಸ್ ಡೇಂಜರ್ ಎಂಬ ಜಾಹಿರಾತು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯರವರು ಹೆಣ್ಣುಮಕ್ಕಳಿಗೆ ಉಚಿತ ಬಸ್ ಸೌಲಭ್ಯ , ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಗಳು ಡೇಂಜರ್ ಆಗುತ್ತವೆಯೇ? ಸಮಾಜವನ್ನು ಒಡೆಯುವಂತಹ ಕಾರ್ಯಗಳು, ಮತಗಳ ಧ್ರುವೀಕರಣ ಮಾಡುವುದು ಅಪಾಯಕಾರಿಯೇ ಹೊರತು, ವಿವಿಧತೆಯಲ್ಲಿ ಏಕತೆಯನ್ನು ತರುವುದು ಡೇಂಜರ್ ಅಲ್ಲ. ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್ ಹೊರತು, ಕಾಂಗ್ರೆಸ್ ಪಕ್ಷವಲ್ಲ. 

ಕಾಂಗ್ರೆಸ್‌ ಅಧಿಕಾರದಲ್ಲಿದ್ದರೇ ಭ್ರಷ್ಟಾಚಾರ ಹೆಚ್ಚಂತೆ? 

ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದರೆ, ಭ್ರಷ್ಟಾಚಾರ ಹೆಚ್ಚಾಗಲಿದೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಕಾನೂನು ಪ್ರಕಾರ ರೇಡ್ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ. ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ, ಯಡಿಯೂರಪ್ಪ , ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ ? ಶೋಭಾ ಕರಂದ್ಲಾಜೆ, ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ, ಅವರ ಮೇಲೆ ರೇಡ್ ಗಳು ಏಕೆ ಆಗುತ್ತಿಲ್ಲ. ಆದಾಯ ತೆರಿಗೆಯನ್ನು ಸರಿಯಾಗಿ ಕಟ್ಟದವರ ಮೇಲೆ ಕ್ರಮವಾಗಲಿ, ಆದರೆ ಒಬ್ಬರ ಮೇಲೆ ರೇಡ್ ಮಾಡಿ ಮತ್ತೊಬ್ಬರನ್ನು ಬಿಡುವ ಬದಲು, ಆದಾಯಮೀರಿ ಆಸ್ತಿ ಸಂಪಾದಿಸಿದ ಎಲ್ಲರ ಮೇಲೆ ಕಾನೂನು ಕ್ರಮವಾಗಬೇಕು ಎಂದರು.

ಬಿಎಸ್‌ವೈ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ ಎನ್ನುತ್ತಿದ್ದಾರೆ?

ಯಡಿಯೂರಪ್ಪನವರ ಹೇಳಿಕೆಗೆ ಉತ್ತರಿಸಿದ ಸಿಎಂ  ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಯಡಿಯೂರಪ್ಪನವರು ಈ ರೀತಿ ಹೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆದ್ದಿತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಶಿವಮೊಗ್ಗವನ್ನೂ ಸೇರಿದಂತೆ 20 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಪಕ್ಷ ನಕಾರಾತ್ಮಕ ವಿಷಯಗಳನ್ನು ಅವಲಂಬಿಸದೇ, ಸದಾ ತನ್ನ ಶಕ್ತಿಯನ್ನು ಅವಲಂಬಿಸಿಯೇ ಚುನಾವಣೆಯನ್ನು ಗೆಲ್ಲುತ್ತೇವೆ 

ಖಜಾನೆ ಖಾಲಿಯಾಗಿದೆ ಅಂತಾ ಮಾಜಿ ಸಿಎಂ ಕುಮಾರಸ್ವಾಮಿಯವರು ಹೇಳುತ್ತಿದ್ದಾರೆ?

ಮಾಜಿ ಸಿಎಂ  ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು ಯಾವ ಆಧಾರದ ಮೇಲೆ ಇಂತಹ ಹೇಳಿಕೆಯನ್ನು ನೀಡಿದ್ದಾರೆ ಎಂಬುದನ್ನು ಮಾಧ್ಯಮದವರು ಪ್ರಶ್ನಿಸಬೇಕು. ಈ ಬಾರಿ ಗ್ಯಾರಂಟಿಗಳಿಗೆ 36 ಸಾವಿರ ಕೋಟಿ ಹಾಗೂ ಮುಂದಿನ ವರ್ಷ 52009 ಕೋಟಿ ರೂ.ಗಳನ್ನು ತೆಗೆದಿರಿಸಲಾಗಿದೆ. ಒಟ್ಟು1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಮೀಸಲಿರಿಸಿದೆ.  

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಅಪಾರಾಧ ಹೆಚ್ಚಾಗ್ತಿದ್ಯಾ?

ಮಾಜಿ ಸಿಎಂ ಕುಮಾರಸ್ವಾಮಿಯವರ ಈ ಆರೋಪ ಸರಿಯಾದುದಲ್ಲ. 2022 ರಲ್ಲಿ ಹೋಲಿಸಿದರೆ ಕಾಂಗ್ರೆಸ್ ಸರ್ಕಾರವಿದ್ದಾಗಲೇ ಅಪರಾಧಗಳು ಕಡಿಮೆಯಾಗಿದೆ. 2023 ರಲ್ಲಿ 1295 ಅಪರಾಧ ಪ್ರಕರಣಗಳು ನಡೆದಿದ್ದರೆ,  ಅವರ ಕಾಲದಲ್ಲಿ 2022 ರಲ್ಲಿ 1370 ಪ್ರಕರಣಗಳು ನಡೆದಿದೆ ಎಂದರು.