ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

Shimoga court gives verdict in Shikaripura rural police station case in connection with woman's murder case ಮಹಿಳೆಯ ಕೊಲೆಪ್ರಕರಣ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ

ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ!   ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಸ್ಟೇಷನ್ (Shikaripura Rural Police Station) ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣ ಸಂಬಂಧ  3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ (3rd Additional District and Sessions Court) ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಆರೋಪ ಸಾಬೀತಾದ ಹಿನ್ನಲ್ಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 

ಏನಿದು ಪ್ರಕರಣ?

ದಿನಾಂಕಃ 09-10-2021 ರಂದು ಕಪ್ಪನಹಳ್ಳಿ ಗ್ರಾಮದ ಅನಿಲ ಎಂಬಾತ ಅದೇ ಗ್ರಾಮದ ವಾಸಿ 35 ವರ್ಷದ ಮಹಿಳೆಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದ. ಈ ಸಂಬಂಧ  ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ಆಗಿತ್ತು. ಆನಂತರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಕೋರ್ಟ್​ನಲ್ಲಿ  ಸರ್ಕಾರದ ಪರವಾಗಿ ಶಾಂತರಾಜ್, ಸರ್ಕಾರಿ ಅಭಿಯೋಜಕರವರು, ಪ್ರಕರಣದ ವಾದ ಮಂಡಿಸಿದ್ದು,  3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಇದೀಗ ಕೋರ್ಟ್ ತೀರ್ಪು ನೀಡಿದೆ. ಅನಿಲ 24 ವರ್ಷ, ಕಪ್ಪನಹಳ್ಳಿ ಗ್ರಾಮ ಶಿಕಾರಿಪುರ ಈತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ ಕೆ ಮಾನು ರವರು ಆರೋಪಿತನಿಗೆ ಜೀವಾವಧಿ ಶಿಕ್ಷೆ ಮತ್ತು 50,000/-  ರೂ ದಂಡ, ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. 


ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

ಶಿವಮೊಗ್ಗ ಜಿಲ್ಲೆ ಆನಂದಪುರದ ಸಮೀಪ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ 8ನೇ ಘಟಿಕೋತ್ಸವದಲ್ಲಿ  ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಯ್ತು! 

ಉದ್ಯಮವಾಗಿಸಿ, ನೌಕರಿ ಕೊಡಿ

ಈ ವೇಳೆ ಮಾತನಾಡಿದ  ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭಾರತವು ಹವಾಮಾನ ವಿವಿಧ ರೀತಿಯ ಸೂಕ್ಷ್ಮ ಮತ್ತು ಕೋಮಲ ಹೂವುಗಳ ಕೃಷಿಗೆ ಸೂಕ್ತವಾಗಿದೆ. ನಮ್ಮ ದೇಶದ ಅನೇಕ ರಾಜ್ಯಗಳಲ್ಲಿ ಹೂವಿನ ಕೃಷಿಯನ್ನು ವಾಣಿಜ್ಯಿಕವಾಗಿ ಮಾಡಲಾಗುತ್ತಿರುವುದರಿಂದ ಭಾರತವು ಹೂವುಗಳ ದೊಡ್ಡ ರಫ್ತುದಾರ ದೇಶವಾಗಿದೆ. ಈ ಹಂತದಲ್ಲಿ ಕೃಷಿ ಪದವಿ ಪಡೆದವರು ಕೃಷಿಯನ್ನು ಉದ್ಯಮವಾಗಿಸಿ ನೌಕರಿಯನ್ನು ನೀಡುವಂತವರಾಗಬೇಕು ಎಂದು ಅಭಿಪ್ರಾಯ ಪಟ್ಟರು. 

ಪಧವಿ ಪ್ರಧಾನ

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ಅಭಿನಂದಿಸಿದ್ರು.., 409 ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ವಿಭಾಗದಲ್ಲಿ ಪದವಿ, 101 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ, 23 ವಿದ್ಯಾರ್ಥಿಗಳಿಗೆ ಪಿಹೆಚ್ಡಿ ಪದವಿ ಪ್ರಧಾನ ಮಾಡಲಾಯ್ತು. 8 ಪದವಿ ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕ, 14 ಎಂ.ಎಸ್ಸಿ ಮತ್ತು 7 ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ 37 ಚಿನ್ನದ ಪದಕ ನೀಡಲಾಯ್ತು. ಅತೀ ಹೆಚ್ಚಿನ ಪದಕ ಪಡೆದ ವಿದ್ಯಾರ್ಥಿಗಳು ತಮ್ಮ ಸಾಧನೆಗೆ ಕಾರಣರಾದ ಪೋಷಕರು ಹಾಗೂ ಉಪನ್ಯಾಸಕರು ಧನ್ಯವಾದ ಹೇಳಿದ್ರು ಕೃಷಿ ಸಚಿವ ಚೆಲುವರಾಯಸ್ವಾಮಿ, ವಿವಿ ಕುಲಪತಿ ಡಾ ಆರ್.ಸಿ.ಜಗದೀಶ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದ್ರು…

ಸ್ಮರಣೀಯ ಸಂಗತಿ

ಇನ್ನೂ ಗೌರವ ಡಾಕ್ಟರೇಟ್ ಪಡೆದು ಮಾತನಾಡಿದ ಬಿಎಸ್ವೈ, ನನ್ನ ಬದುಕಿನ ಅತ್ಯಂತ ಸ್ಮರಣೀಯ ಸಂಗತಿ ಇದು. ರೈತ ಕುಟುಂಬದ ಮಗನಾಗಿ ಈ ಮಣ್ಣಿನ ಒಡನಾಟದಲ್ಲಿ ನಮ್ಮ ಜಿಲ್ಲೆಯಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದ್ದು ಸಂತಸ ತಂದಿದೆ ಎಂದರು. 

ಅಭಿಮಾನಿಗಳ ಗೊಂದಲ

 ಮಾಜಿ ಸಿಎಂ ಬಿಎಸ್ವೈ ಗೌರವ ಡಾಕ್ಟರೇಟ್ ಸ್ವೀಕರಿಸುವುದನ್ನು ನೋಡಲು ಬಂದಿದ್ದ ಯಡಿಯೂರಪ್ಪ ಅಭಿಮಾನಿಗಳು ಘಟಿಕೋತ್ಸವ ಸಭಾಂಗಣದ ಹೊರಗೆ ಘೋಷಣೆ ಕೂಗಿದ್ದರಿಂದ ಕೆಲಕಾಲ ಗೊಂದಲ ಸಹ ನಿರ್ಮಾಣವಾಯ್ತು. ಕೂಡಲೇ ಮಧ್ಯ ಪ್ರವೇಶಿಸಿದ ಸಂಸದ ಬಿ.ವೈ.ರಾಘವೇಂದ್ರ ಎಲ್ಲವನ್ನೂ ತಿಳಿಗೊಳಿಸಿ, ಬೆಂಬಲಿಗರನ್ನು ಒಳಗೆ ಬಿಡಿಸಿ, ಕಾರ್ಯಕ್ರಮ ನೋಡಲು ಅನುವು ಮಾಡಿಕೊಟ್ರು.. ಒಟ್ಟಾರೆ, ಕೃಷಿ ವಿವಿಯ 8ನೇ ಘಟಿಕೋತ್ಸವ ಇಂದು ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಗಿದ್ದು ನಿಜಕ್ಕೂ ವಿಶೇಷ.ತಾಲೂಕಿನ ಆನಂದಪುರ ಸಮೀಪದ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ 8ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಷಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಚ್‌ಎಚ್‌ಡಿ ಪದವಿ ಪ್ರಧಾನ ಮಾಡಿ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ಪುಷ್ಪ ಕೃಷಿಯನ್ನು ಪಾಲಿಹೌಸ್ ತಂತ್ರಜ್ಞಾನದಲ್ಲಿ ಆಧುನಿಕವಾಗಿ ಮಾಡುವ ಅವಕಾಶ ಕೃಷಿ ಪದವೀಧರರಿಗಿದ್ದು, ಇದನ್ನು ಬೃಹತ್ ಉದ್ಯಮವಾಗಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

24 ಗಂಟೆಯಲ್ಲಿ 323.90 MM ಮಳೆ! ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟು ಮಳೆಯಾಗಿದೆ? ವರದಿ ಇಲ್ಲಿದೆ

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

ಶಿವಮೊಗ್ಗ ನಾಗರಿಕರ ಗಮನಕ್ಕೆ! ನಾಳೆ ಈ ಪ್ರದೇಶಗಳಲ್ಲಿ ಪವರ್ ಕಟ್!

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 ​