KARNATAKA NEWS/ ONLINE / Malenadu today/ Apr 27, 2023 GOOGLE NEWS
ಶಿವಮೊಗ್ಗ/ ಲೈಂಗಿಕ ಕಿರುಕುಳ ನೀಡಿದ ಆರೋಪಿಯೊಬ್ಬನಿಗೆ ಶಿವಮೊಗ್ಗ ಕೋರ್ಟ್ 4 ವರ್ಷ ಶಿಕ್ಷೆ ನೀಡಿ ಆದೇಶಿಸಿದೆ. ಈ ಸಂಬಂಧ ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ.
ಏನಿದು ಕೇಸ್?
2020ನೇ ಸಾಲಿನಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 23 ವರ್ಷದ ಯುವಕನೊಬ್ಬ , 20 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಸ್ವತಃ ನೊಂದ ಯುವತಿಯು ದೂರು ನೀಡಿದ್ದರು. ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.
ಕೋರ್ಟ್ ಮೆಟ್ಟಿಲೇರಿದ್ದ ಕೇಸ್
ಪ್ರಕರಣದ ತನಿಖೆ ಕೈಗೊಂಡಿದ್ದ ಅಂದಿನ ತನಿಖಾಧಿಕಾರಿಗಳಾದ ಪ್ರವೀಣ್ ನೀಲಮ್ಮ ನವರ್, ಸಿಪಿಐ ಮಾಳೂರು ವೃತ್ತ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಈ ಸಂಬಂಧ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ವಿಚಾರಣೆ ಆರಂಭವಾಗಿತ್ತು. ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ವಾದ ಮಂಡಿಸಿದ್ದರು.
20 ವರ್ಷ ಶಿಕ್ಷೆ
ಸದ್ಯ ಪ್ರಕರಣದ ತೀರ್ಪು ಹೊರಬಿದ್ದಿದ್ದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ ದ ನ್ಯಾಯಾದೀಶರು ಮಲ್ಲಿಕಾರ್ಜುನ ಗೌಡ ಆರೋಪಿಗೆ 4 ವರ್ಷ ಶಿಕ್ಷೆ ವಿಧಿಸಿದ್ದಾರೆ. ಮತ್ತು 20,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿದ್ದಾರೆ.
