ದಾವಣಗೆರೆ ಜಿಲ್ಲೆ ನ್ಯಾಮತಿ ನಿವಾಸಿಗೆ 20 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್! ಕಾರಣ ಇಲ್ಲಿದೆ

The Addl District and Sessions Court, FTSC–II (POCSO) Shivamogga sentences Nyamathi resident of Davanagere district to 20 years in jail Here's the reason

ದಾವಣಗೆರೆ ಜಿಲ್ಲೆ ನ್ಯಾಮತಿ ನಿವಾಸಿಗೆ 20 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್! ಕಾರಣ ಇಲ್ಲಿದೆ

SHIVAMOGGA NEWS / Malenadu today/ Nov 30, 2023 | Malenadutoday.com  

SHIVAMOGGA  | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ The Addl District and Sessions Court, FTSC–II (POCSO) Shivamogga ಕೋರ್ಟ್​ ಮಹತ್ವದ ತೀರ್ಪು ನೀಡಿದೆ. 

The Addl District and Sessions Court, FTSC–II (POCSO) Shivamogga 

 2021ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆ ನ್ಯಾಮತಿಯ ವಾಸಿ 34 ವರ್ಷದ ವ್ಯಕ್ತಿಯೊಬ್ಬನು, 09  ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಕೇಳಿ ಬಂದಿತ್ತು

ವಿನೋಬನಗರ ಪೊಲೀಸ್ ಠಾಣೆ/ vinobanagar police station shivamogga 

ಈ ಸಂಬಂಧ  ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. 

ಆಗಿನ ತನಿಖಾಧಿಕಾರಿಗಳಾದ  ರವಿ ಎನ್ ಎಸ್, ಸಿಪಿಐ ವಿನೋಬನಗರ ವೃತ್ತ ರವರು ತನಿಖೆ ಕೈಗೊಂಡು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. 

ಶಿವಮೊಗ್ಗ ಕೋರ್ಟ್​ 

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ  ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.

ಸದ್ಯ ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರು ದಿನಾಂಕ: 29-11-2023 ರಂದು ಆರೋಪಿತನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 2,00,000 /- ರೂ ದಂಡ, ದಂಡಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 06 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದು  ಹಾಗೂ ನೊಂದ ಬಾಲಕಿಗೆ ಪರಿಹಾರವಾಗಿ 3,00,000/- ರೂಗಳನ್ನು ನೀಡಲು ಆದೇಶ ನೀಡಿದ್ದಾರೆ