ಚಾಕು ತೋರಿಸಿ ದರೋಡೆ, ಇಂಗ್ಲಿಷನಿಗೆ ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ ?

ಹಂಚಿಕೊಳ್ಳಿ
WhatsApp Facebook X Telegram
Shimoga Court Sentences Robber to 7 Years Jail
Shimoga Court Sentences Robber to 7 Years Jail

ಶಿವಮೊಗ್ಗ: ನಗರದ ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್ ಹತ್ತಿರ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಶಿಕ್ಷೆಯ ಆದೇಶವನ್ನು ನೀಡಿದೆ.

ಶಿವಮೊಗ್ಗ ಬ್ರೇಕಿಂಗ್: ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಭೇಟಿ: ದಾಖಲೆಗಳ ಪರಿಶೀಲನೆ

Shimoga Court ಘಟನೆ ವಿವರ

ಈ ದರೋಡೆ ಘಟನೆ ನಡೆದಿದ್ದು ಸುಮಾರು 4 ವರ್ಷಗಳ ಹಿಂದೆ, ಅಂದರೆ 2021ರಲ್ಲಿ. ವ್ಯಕ್ತಿಯೊಬ್ಬರು ನಗರದ ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅವರನ್ನು ತಡೆದಿದ್ದಾರೆ. ಅಷ್ಟೇ ಅಲ್ಲದೆ, ಮಾರಕಾಸ್ತ್ರವಾದ ಚಾಕು ತೋರಿಸಿ ಪ್ರಾಣ ಬೆದರಿಕೆ ಹಾಕಿ, ಅವರ ಬಳಿಯಿದ್ದ 500 ರೂಪಾಯಿ ನಗದು, ಮೊಬೈಲ್ ಫೋನ್ ಹಾಗೂ ಎಟಿಎಂ ಕಾರ್ಡ್‌ಗಳನ್ನು ಬಲವಂತವಾಗಿ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಪ್ರಕರಣದ ಅಂದಿನ ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್ಸ್‌ಪೆಕ್ಟರ್ (PI) ಸಂಜೀವ್ ಕುಮಾರ್ ಅವರು ಸಾಕ್ಷ್ಯಾಧಾರಗಳನ್ನು ಕಲೆಹಾಕಿ, ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಚಾರ್ಜ್​ ಶೀಟ್​​ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಮಮತಾ ಬಿ.ಎಸ್. ಅವರು ವಾದ ಮಂಡಿಸಿದ್ದರು. ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆದಿದ್ದು, ಆರೋಪಿ ಮೊಹಮ್ಮದ್ ನೂರುಲ್ಲಾ @ ಇಂಗ್ಲೀಷ್ ಎಂಬಾತನ ಮೇಲಿನ ದರೋಡೆ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಅಪರಾಧಿಗೆ 7 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ 10,000 ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. 

Shimoga Court Sentences Robber to 7 Years Jail

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor