SHIVAMOGGA NEWS TODAY

ಶಿವಮೊಗ್ಗ :  ಕ್ರೆಡಿಟ್​ ಕಾರ್ಡ್​​ನಲ್ಲಿ ಹಣ ಕಟ್ಟಾಗಲ್ಲ ಅಂತ ಆ್ಯಪ್​ ಡೌನ್ಲೋಡ್​​​ ಮಾಡಿಸಿಕೊಂಡ್ರು, ಆಮೇಲೆ ಏನಾಯ್ತು ಗೊತ್ತಾ ?

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

shimoga Credit Card Fraud ಶಿವಮೊಗ್ಗ: ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ, ಕ್ರೆಡಿಟ್ ಕಾರ್ಡ್‌ನಿಂದ ಕಡಿತವಾಗಲಿರುವ ವಿಮಾ ಹಣವನ್ನು ತಡೆಯಿಕೊಡುವುದಾಗಿ ನಂಬಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಮೊತ್ತದ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. 

ಶಿವಮೊಗ್ಗ : ಚಿನ್ನ ಖರೀದಿಸುವ ಮುನ್ನ ಈ ಗೋಲ್ಡ್​ ರೇಟಿನ ದರಪಟ್ಟಿ ಒಮ್ಮೆ ಗಮನಿಸಿ!

ನಡೆದಿದ್ದೇನು?

ನಗರದ ವ್ಯಕ್ತಿಯೊಬ್ಬರಿಗೆ ಅಪರಿಚಿತ ನಂಬರ್‌ನಿಂದ ಕರೆ ಬಂದಿದ್ದು, ವಂಚಕರು ತಾವು ಬ್ಯಾಂಕ್‌ನಿಂದ ಮಾತನಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದಾರೆ. ನಿಮ್ಮ ಕ್ರೆಡಿಟ್ ಕಾರ್ಡ್‌ನಿಂದ ಇನ್ಶೂರೆನ್ಸ್ ಹಣ ಕಡಿತವಾಗುತ್ತಿದೆ, ಅದನ್ನು ನಾವು ರದ್ದುಗೊಳಿಸಿ ನಿಮ್ಮ ಹಣ ಉಳಿಸಿಕೊಡುತ್ತೇವೆ ಎಂದು ಆಮಿಷ ಒಡ್ಡಿದ್ದಾರೆ. ಇದನ್ನು ನಂಬಿದ ಸಂತ್ರಸ್ತರು ವಂಚಕರ ಜಾಲಕ್ಕೆ ಬಿದ್ದಿದ್ದಾರೆ.

ವಂಚಕರು ನೀಡಿದ ಸೂಚನೆಯಂತೆ ಸಂತ್ರಸ್ತರು ತಮ್ಮ ಮೊಬೈಲ್‌ನಲ್ಲಿ ಒಂದು ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಬಳಿಕ ಆ ಆ್ಯಪ್‌ನಲ್ಲಿ ತಮ್ಮ ಬಳಿಯಿದ್ದ ಮೂರು ಪ್ರತ್ಯೇಕ ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್ ಮಾಹಿತಿಯನ್ನು ನಮೂದಿಸಿದ್ದಾರೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ವಂಚಕರು ಹಂತ ಹಂತವಾಗಿ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ. 

ತಮ್ಮ ಕ್ರೆಡಿಟ್ ಕಾರ್ಡ್‌ಗಳಿಂದ ಒಟ್ಟು 3,06,261 ರೂಪಾಯಿ ಕಡಿತವಾಗಿರುವ ಮೆಸೇಜ್ ಬಂದಾಗ ವ್ಯಕ್ತಿಗೆ ತಾವು ವಂಚನೆಗೆ ಒಳಗಾಗಿರುವುದು ಅರಿವಾಗಿದೆ. ಕೂಡಲೇ ಅವರು ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.  

shimoga Credit Card Fraud Man Loses ₹3 Lakh

shimoga Credit Card Fraud Bhadravathi Caste Abuse Bee Attack Shivamogga Sharavathi Project Sagara PoliceShimoga Court Shivamogga Careers Ripponpete Shivamogga Unknown Body Found Near Tuppur Hybrid Vegetable Seeds Shikaripura Laborer Dies Shivamogga Court Bhadravati Court Unidentified Man Soraba Ghana Detains Bhadravathi Arson Anandapura Shivamogga Shivaratri Rules Swathantryada Ota Court Orders Walk-in Interview Shivamogga Court KFD Fatality Shivamogga Round up
shimoga Credit Card Fraud
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.