ಶಿವಮೊಗ್ಗ : ದುಷ್ಕರ್ಮಿಗಳು ಗಾರೆಮೇಸ್ತ್ರಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗಾಜನೂರಿನ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆದಿದೆ. ಶ್ರೀನಿವಾಸ್ (36) ಕೊಲೆಯಾದ ದುರ್ದೈವಿ.
ಶಿವಮೊಗ್ಗ-ತೀರ್ಥಹಳ್ಳಿ ರಸ್ತೆ ಸಂಚಾರದಲ್ಲಿ ಈ ದಿನ ಮಾರ್ಗ ಬದಲಾವಣೆ: ಯಾವಾಗ, ಏಕೆ..?
ಮೃತ ಶ್ರೀನಿವಾಸ್ ಕಳೆದು ಒಂದು ವರ್ಷಗಳಿಂದ ಗಾಜನೂರಿನ ಹೊಸಮನೆಯಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇಂದು ಅವರ ಹತ್ಯೆಯಾಗಿದ್ದು, ಕೃತ್ಯ ಎಸಗಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ವಿಷಯ ತಿಳಿಯುತ್ತಿದ್ದಂತೆಯೇ ತುಂಗಾನಗರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Shimoga Crime Man Murdered at Gajanuru


Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.